ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಚಿವ ಸುರೇಶ್ ಕುಮಾರ್

varthajala
0

 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಎಲ್ಲಾ ವಿದ್ಯಾರ್ಥಿಗಳನ್ನು ಈ ಬಾರಿ ಉತ್ತೀರ್ಣಗೊಳಿಸುವ ಕುರಿತು ರಾಜ್ಯ ಸರಕಾರ ತೀರ್ಮಾನಿಸಿದೆ. ಅಲ್ಲದೇ ಪರೀಕ್ಷೆಯಿಲ್ಲದೇ ಉತ್ತೀರ್ಣಗೊಳಿಸುವ ಕುರಿತು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿಯೂ ಹೇಳಿದ್ದರು.

ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಿದ್ದತೆ ನಡೆಸುತ್ತಿದೆ. ಸದ್ಯ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ನಾವು ಆ ಬಗ್ಗೆ ತೀರ್ಮಾನಿಸಿಯೂ ಇಲ್ಲ. ಹೀಗಾಗಿ ಆರೋಗ್ಯ ಸಚಿವರ ಜೊತೆಗೆ ಮಾತುಕತೆ ನಡೆಸಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇನೆ ಸಚಿವ ಎಸ್.ಸುರೇಶ್ ಕುಮಾರ್  ಹೇಳಿದ್ದಾರೆ. 

Tags

Post a Comment

0Comments

Post a Comment (0)