ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

varthajala
0
ಬೆಂಗಳೂರು, ಆಗಸ್ಟ್ 02 (ಕರ್ನಾಟಕ ವಾರ್ತೆ): ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಏಕಲವ್ಯ ಮಾದರಿ/ಅಟಲ್ ಬಿಹಾರಿ ವಾಜಪೇಯಿ/ ಡಾ.ಬಿ.ಆರ್.ಅಂಬೇಡ್ಕರ್/ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 2021-22ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 10, 2021 ಕೊನೆಯ ದಿನಾಂಕವಾಗಿದೆ. ಪ್ರವೇಶ ಪರೀಕ್ಷೆಯನ್ನು ದಿನಾಂಕ: 16-09-2021 ರಂದು ನಡೆಸಲಾಗುವುದು. ಪ್ರವೇಶ ಪತ್ರಗಳನ್ನು ದಿನಾಂಕ: 04-09-2021 ರಿಂದ 13-09-2021 ರವರೆಗೆ ಡೌನ್‍ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪರೀಕ್ಷೆಯ ಫಲಿತಾಂಶ ಮತ್ತು ಮೊದಲನೇ ಸುತ್ತಿನ ಶಾಲೆಗಳ ಹಂಚಿಕೆಯನ್ನು ಪ್ರಾಧಿಕಾರ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್‍ಸೈಟ್:  http://kea.kar.nic.in     ನಲ್ಲಿ ಪ್ರಕಟಿಸಲಾಗುವುದು.
 
ವಿಶೇಷ ಅವಕಾಶ: ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ರಾಜ್ಯದ ಯಾವುದೇ ವಸತಿ ಶಾಲೆಯಲ್ಲಿ ಖಾಲಿ ಇರುವ ಸ್ಥಾನಕ್ಕೆ ನೇರವಾಗಿ ಪ್ರವೇಶ ಕಲ್ಪಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ವಿಳಾಸ:  keauthority-ka@nic.in  ಹಾಗೂ ಸಹಾಯವಾಣಿ ಸಂಖ್ಯೆ: 080-23460480 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Tags

Post a Comment

0Comments

Post a Comment (0)