ಅಕ್ಟೋಬರ್ 21 ರಿಂದ ಕರ್ನಾಟಕ ಮುಕ್ತ ಶಾಲೆ ಪೂರಕ ಪರೀಕ್ಷೆ

varthajala
0

ಬೆಂಗಳೂರು, ಸೆಪ್ಟೆಂಬರ್ 22, (ಕರ್ನಾಟಕ ವಾರ್ತೆ): ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಕರ್ನಾಟಕ ಮುಕ್ತ ಶಾಲೆ (ಕೆ.ಓ.ಎಸ್) ಪೂರಕ ಪರೀಕ್ಷೆ ಅಕ್ಟೋಬರ್ -2021 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಕ್ಟೋಬರ್ 21 ರಿಂದ ಅಕ್ಟೋಬರ್ 30 ರವರೆಗೆ ಕೆ.ಓ.ಎಸ್. ಪೂರಕ ಪರೀಕ್ಷೆಗಳನ್ನು ನಿಗಧಿತ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


ಡಿಪ್ಲೋಮಾ ಪ್ರವೇಶ ಪ್ರಕ್ರಿಯೆ ದಿನಾಂಕ ವಿಸ್ತರಣೆ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯಲ್ಲಿ ಪ್ರಥಮ ಸೆಮಿಸ್ಟರ್ ಟೆಕ್ಸ್‍ಟೈಲ್ ಟೆಕ್ನಾಲಜಿ ಡಿಪ್ಲೋಮಾ ಕೋರ್ಸಿಗೆ ಸೆಪ್ಟೆಂಬರ್ 30 ರವರೆಗೆ ಪ್ರವೇಶ ಪ್ರಕ್ರಿಯೆಯನ್ನು ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಎಸ್.ಎಲ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡ 35% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಥವಾ ಐ.ಟಿ.ಐ / ಪಿ.ಯು.ಸಿಯಲ್ಲಿ ಉತ್ತೀರ್ಣ / ಅನುತ್ತೀರ್ಣವಾಗಿರಬಹುದು. ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಕಾಲೇಜಿಗೆ ಬಂದು ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9481101049, 9448705205, 080-22267580 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)