ಮಕ್ಕಳ ಸುರಕ್ಷತೆಗೆ ಸೂಕ್ತ ಕ್ರಮ : ಸಚಿವ ಬಿ.ಸಿ ನಾಗೇಶ್

varthajala
0


ಬೆಂಗಳೂರು: ರಾಜ್ಯದಲ್ಲಿ 21 ತಿಂಗಳ ಬಳಿಕ 1ರಿಂದ 5ನೇ ತರಗತಿವರೆಗಿನ ಶಾಲೆಗಳು ಪುನರಾರಂಭಗೊ0ಡಿವೆ.

ಕೋರೋನಾದಿAದ ಸ್ಥಗಿತಗೊಂಡಿದ್ದ ಶಾಲೆಗಳು ಮತ್ತೆ ಆರಂಭಗೊAಡಿದ್ದು ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಶಿವಮೊಗ್ಗದ ಮಲವಗೊಪ್ಪ ಹಾಗೂ ಗಾಡಿಕೊಪ್ಪ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಅವರನ್ನು ಶಾಲೆಗೆ ಸ್ವಾಗತಿಸಿದರು. ಬಳಿಕ ಅವರು ಶಾಲೆಯಲ್ಲಿ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿದರು.

ಇನ್ನು, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳು ಉತ್ಸಾಹದಿಂದ ತಮ್ಮ ಕಲಿಕೆಯನ್ನು ಮುಂದುವರೆಸಲಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ ನಾರಾಯಣ ಒಂದೂವರೆ ವರ್ಷದ ನಂತರ ಶಾಲೆಗೆ ತೆರಳುತ್ತಿರುವ ಎಲ್ಲಾ ಮಕ್ಕಳಿಗೆ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. ಒಂದೂವರೆ ವರ್ಷದ ಬಳಿಕ ಶಾಲೆಗಳತ್ತ ಮುಖ ಮಾಡಿರುವ ಚಿಣ್ಣರನ್ನು ಸ್ವಾಗತಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಸಿದ್ದತೆಗಳನ್ನೂ ಮಾಡಿ ಕೊಂಡಿದೆ. ಮೊದಲ ವಾರ ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1.30 ರವರೆಗೆ ಅರ್ಧ ದಿನ ಮಾತ್ರ ತರಗತಿಗಳು ನಡೆಯಲಿವೆ. ಹೀಗಾಗಿ, ಈ ದಿನಗಳಲ್ಲಿ ಮಧ್ಯಾಹ್ನದ ಬಿಸಿಯೂಟವನ್ನು ಸ್ಥಗಿತಗೊಳಿಸಲಾಗಿದೆ. ನವೆಂಬರ್ 2ರಿಂದ ಪೂರ್ಣ ಅವಧಿ ಬೆಳಿಗ್ಗೆ 10ರಿಂದ ಸಂಜೆ 4.30ರವರೆಗೆ ಶಾಲೆ ನಡೆಯಲಿದ್ದು, ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಇರಲಿದೆ. ಶನಿವಾರ ಬೆಳಗ್ಗೆ 8 ರಿಂದ 11.40 ರವರೆಗೆ ತರಗತಿಗಳು ನಡೆಯಲಿವೆ. ತರಗತಿಯ ಕೊಠಡಿಯೊಂದರಲ್ಲಿ ಗರಿಷ್ಠ 20 ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅಥವಾ ಒಟ್ಟು ಹಾಜರಾಗುವ ಮಕ್ಕಳಲ್ಲಿ ಶೇಕಡ 50ರಷ್ಟು ಮಕ್ಕಳಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಆದರೆ, ಯಾವುದೇ ಶಾಲೆಯಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತೆರೆಯಲು ಅವಕಾಶ ನೀಡಿಲ್ಲ.

ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ತರಬೇಕು. ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದ ಶಿಕ್ಷಕರು ಮಾತ್ರ ಬೋಧನೆ ಮಾಡಬೇಕು ಎಂದು ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

Tags

Post a Comment

0Comments

Post a Comment (0)