SCHOLARSHIP : 2021-22ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

varthajala
0

ಬೆಂಗಳೂರು, ಅಕ್ಟೋಬರ್ 26 (ಕರ್ನಾಟಕ ವಾರ್ತೆ): 2021-22ನೇ ಸಾಲಿಗೆ 1 ರಿಂದ 10ನೇ ತರಗತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.  ಈ ಯೋಜನೆಯಡಿ 2020-21ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. 2021-22ನೇ ಸಾಲಿನ ಹೊಸ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ವಿದ್ಯಾರ್ಥಿಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ -  ಐಡಿ, ಸಂಬಂಧಪಟ್ಟ ಶಾಲೆಗಳಿಂದ ಪಡೆದು ಪೋಷಕರ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ಆಧಾರ್ ಕಾರ್ಡಿನಲ್ಲಿ ನಮೂದಿಸಿರುವಂತೆ ಹೆಸರನ್ನು ಬರೆಯಬೇಕು.


ಪೋಷಕರ ಆದಾಯಮಿತಿ: 1 ರಿಂದ 8ನೇ ತರಗತಿಯ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ ರೂ 6.00 ಲಕ್ಷಗಳ ಒಳಗಿರಬೇಕು.  9ರಿಂದ 10ನೇ ತರಗತಿಯ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ ರೂ. 2.5 ಲಕ್ಷಗಳ ಒಳಗಿರಬೇಕು.
ವಿದ್ಯಾರ್ಥಿ ವೇತನ ಮಾಹಿತಿಗಾಗಿ ರಾಜ್ಯ ವಿದ್ಯಾರ್ಥಿವೇತನ ಪೊರ್ಟಲ್ http://ssp.karnataka.gov.in/    ನ್ನು  ಪರಿಶೀಲಿಸುವುದು.
 
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ sw.kar.nic.in ನ್ನು ಅಥವಾ ಕಚೇರಿ ಅವಧಿಯಲ್ಲಿ ದೂರವಾಣಿ ಸಂಖ್ಯೆ 080-27859557ನ್ನು ಸಂಪರ್ಕಿಸಬಹುದಾಗಿದೆ.
Tags

Post a Comment

0Comments

Post a Comment (0)