ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ

varthajala
0

ಬೆಂಗಳೂರು, ನವೆಂಬರ್ 06, (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ‘ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ’ಗೆ 45 ದಿನಗಳ ತರಬೇತಿ ಶಿಬಿರವನ್ನು ನಡೆಸಲು ನಿರ್ಧರಿಸಲಾಗಿದೆ

ಆಸಕ್ತರು ದಿನಾಂಕ: 12.11.2021 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಕುಲಸಚಿವರು ತಿಳಿಸಿದ್ದಾರೆ.  ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Tags

Post a Comment

0Comments

Post a Comment (0)