BIG BREAKING SSlc ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಕರ್ನಾಟಕ ಶಿಕ್ಷಣ ಇಲಾಖೆ

varthajala
0

ಬೆಂಗಳೂರು, ಜನವರಿ 20: 2021-22ನೇ ಸಾಲಿನ ಕರ್ನಾಟಕ SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ಪ್ರಕಟ ಮಾಡಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು(ಗುರುವಾರ) SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆಬ್ರವರಿ 21ರಿಂದ 26ರವರೆಗೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿವೆ. ಬೆಳಗ್ಗೆ 1.30ರಿಂದ ಮಧ್ಯಾಹ್ನ 1.45ರವರಗೆ ಪರೀಕ್ಷೆಗಳು ನಡೆಯಲಿವೆ.



SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ * 21-2-2022: (ಪ್ರಥಮ ಭಾಷೆ): ಕನ್ನಡ, ತೆಲಗು, ತಮಿಳು, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ, * 22-2-2022: ಸಮಾಜ ವಿಜ್ಞಾನ *23-2-2022: (ದ್ವಿತೀಯ ಭಾಷೆ): ಇಂಗ್ಲಿಷ್, ಕನ್ನಡ * 24-2-2022: ಗಣಿತ * 25-2-2022: (ತೃತೀಯ ಭಾಷೆ): ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಪರ್ಷಿಯನ್ *26-2-2022 (ಕೋರ್ ಸಬ್ಜೆಕ್ಟ್): ವಿಜ್ಞಾನ

ಮುಖ್ಯ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ SSಐಅ (10ನೇ ತರಗತಿ) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಜ.06ರಂದು 2021-22ನೇ ಸಾಲಿನ 10ನೇ ತರಗತಿ (SSLC)ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿವೆ. SSಐಅ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಮಾರ್ಚ್ 28- ಕನ್ನಡ ಮಾರ್ಚ್ 30- ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಏಪ್ರಿಲ್ 1- ಅರ್ಥಶಾಸ್ತ್ರ ಏಪ್ರಿಲ್ 4 - ಗಣಿತ, ಸಮಾಜ ಶಾಸ್ತ್ರ ಏಪ್ರಿಲ್ 6 - ಸಮಾಜ ವಿಜ್ಞಾನ ಏಪ್ರಿಲ್ 8 - ತೃತೀಯ ಭಾಷೆ ಹಿಂದಿ ಏಪ್ರಿಲ್ 11 - ವಿಜ್ಞಾನ

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ, ಪೂರ್ವ ಸಿದ್ಧತಾ ಮತ್ತು ಪ್ರಾಯೋಗಿಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿದ್ದು ಅದರ ವಿವರಗಳನ್ನು ಸಹ ಪರೀಕ್ಷೆ ವೇಳಾಪಟ್ಟಿಯೊಂದಿಗೆ ಇಲಾಖೆಯು ಪ್ರಕಟಿಸಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವೇಳಾಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಚೆಕ್ ಮಾಡಬಹುದು. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ದಿನಾಂಕ 17-02-2022 ರಿಂದ 25-03-2022 ರವರೆಗೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ದಿನಾಂಕ 14-03-2022 ರಿಂದ 25-03-2022 ರವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು 14-04-2022 ರಿಂದ 04-05-2022 ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 2021-22ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು  28-03-2022 ರಿಂದ 13-04-2022ರವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಪಿಯುಸಿ ವೇಳಾಪಟ್ಟಿ : ಏಪ್ರಿಲ್ 14- ಗಣಿತ ಏ.18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಏ.20- ಇತಿಹಾಸ, ಭೌತಶಾಸ್ತ್ರ ಏ.22- ತರ್ಕಶಾಸ್ತ್ರ ಏ.23- ಮನಃಶಾಸ್ತ್ರ, ರಸಾಯನಶಾಸ್ತ್ರ, ಏ.25- ಅರ್ಥಶಾಸ್ತ್ರ ಏ.26- ಹಿಂದಿ, ಏ.28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಏ.29- ಕನ್ನಡ ಏ.30- ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್ಮೇ 2- ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ ಮೇ 4- ಇಂಗ್ಲಿಷ್ ಪರೀಕ್ಷೆ.

Post a Comment

0Comments

Post a Comment (0)