ಯುವಕರೇ ದೇಶದ ಸಂಪತ್ತು : ನ್ಯಾ.ಹೇಮಲತಾ

varthajala
0

ಬಾಗಲಕೋಟೆ: ಜ.18: ಯುವಕರೇ ದೇಶದ ಸಂಪತ್ತಾಗಿದ್ದು, ಅವರನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಹೇಳಿದರು.


ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಭಾಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಇಲಾಖೆ, ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟಿçÃಯ ಯುವ ಸಪ್ತಾಹ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ಯುವ ಸಮುಹ ನಮ್ಮ ದೇಶದ ಆಸ್ತಿಯಾಗಿದ್ದು, ಅವರನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ಸ್ವಾಮಿ ವಿವೇಕಾನಂದರ ಯುವ ಜನತೆಯ ಮೇಲೆ ಅಪಾರ ಕಾಳಜಿವಹಿಸುತ್ತಿದ್ದರು. ಅವರ ಆದರ್ಶ ಅಳವಡಿಕೊಳ್ಳಬೇಕು. ಅವರು ಜೀವನದ ಮೌಲ್ಯ ತಿಳಿಸಕೊಡುವದರ ಜೊತೆಗೆ ದಾರಿದೀಪವಾಗಿದ್ದಾರೆ ಎಂದರು.

ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅಗತ್ಯವಾಗಿದ್ದು, ಕಾನೂನಿನ ಅರಿವು ಎಲ್ಲ ಪಡೆದುಕೊಳ್ಳಬೇಕು. ಅನ್ಯಾಯಕ್ಕೊಳಗಾದಾಗ ಅಸಾಯಕರಿಗೆ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತವಾಗಿ ನೆರವು ನೀಡಲಾಗುತ್ತದೆ. ನಾವೆಲ್ಲರೂ ಕಾನೂನಿನ ಅಡಿಯಲ್ಲಿ ಜೀವಿಸುತ್ತಿದ್ದು, ಅವುಗಳ ಬಗ್ಗೆ ಅರಿವು ಸಹ ಮುಖ್ಯವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಹಿತಿ ಡಾ.ಪ್ರಕಾಶ ಖಾಡೆ ಮಾತನಾಡಿ ದೇಶ ಕಂಡ ಅಪ್ರತಿಮ ಸಂತ ಸ್ವಾಮಿ ವಿವೇಕಾನಂದ ಸ್ಪೂರ್ತಿ ಯುವಕರಿಗೆ ಅಗತ್ಯವಾಗಿದೆ. ಭಾರತದ ದೇಶದಲ್ಲಿ ಬಾಳು ನಾವೆಲ್ಲರೂ ಉತ್ತಮ ಸಂಸ್ಕೃತಿ ಉಳ್ಳವರಾಗಿದ್ದು, ಅದನ್ನು ಎಲ್ಲರೂ ಪಾಲಿಸಬೇಕು. ಸಂಸ್ಕೃತ, ಸುಸಂಸ್ಕೃತರಾಗಿ ಬಾಳಬೇಕೆ ವಿನಃ ವಿಕೃತರಾಗಿ ಬಾಳಬಾರದು. ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಸಂಸ್ಕೃತಿ ನಮ್ಮ ಭಾರತೀಯ ಸಂಸ್ಕೃತಿ ಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎನ್.ವಾಯ್.ಕುಂದರಗಿ ಮಾತನಾಡಿ ಯುವಕರು ಉತ್ತಮ ಸಾಧಕರಾಗುವದರ ಜೊತೆಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಯುವ ಅಧಿಕಾರಿ ಸುಶ್ಮಾ ಗವಳಿ, ಸೈಕ್ಲಿಂಗ್ ತರಬೇತುಗಾರ್ತಿ ಅನಿತಾ ನಿಂಬರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Post a Comment

0Comments

Post a Comment (0)