RTE' ಪ್ರವೇಶ :ಅರ್ಜಿ ಸಲ್ಲಿಕೆ ಆರಂಭ

varthajala
0

 RTE' ಪ್ರವೇಶ : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : ಅರ್ಜಿ ಸಲ್ಲಿಕೆ ಆರಂಭ, ಮಾ.3 ಕೊನೆಯ ದಿನ | RTE Application

ಬೆಂಗಳೂರು: 2022-23ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯಿದೆಯಡಿ ( Right To Education Act - RTE ) ದಾಖಲಾತಿಯನ್ನು ಪ್ರಾರಂಭಿಸಲಾಗಿದೆ. ದಿನಾಂಕ 03-02-2022ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ಅರ್ಜಿ ( Application ) ಸಲ್ಲಿಸೋದಕ್ಕೆ ದಿನಾಂಕ 03-03-2022 ಕೊನೆಯ ದಿನಾಂಕವಾಗಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ( School Education Department ) ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2022-23ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 03-02-2022 ರಿಂದ 03-03-2022ರವರೆಗೆ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ-2009ರ ಸೆಕ್ಷನ್ 12(1) (ಬಿ) ಹಾಗೂ 12(1)(ಸಿ) ಪ್ರಕಾರ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ಪೋಷಕರು ತಮ್ಮ ವ್ಯಾಪ್ತಿಯ ನೆರೆಹೊರೆಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ ಖಚಿತ ಪಡಿಸಿಕೊಂಡು, ದಾಖಲಾತಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದ್ದಾರೆ.

Post a Comment

0Comments

Post a Comment (0)