ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳ ಫಲಿತಾಂಶ ಪ್ರಕಟ

varthajala
0


ಬೆಂಗಳೂರು, ಮಾರ್ಚ್ 21 (ಕರ್ನಾಟಕ ವಾರ್ತೆ) :
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಡಿಸೆಂಬರ್ 2021 ರ ಮಾಹೆಯಲ್ಲಿ ನಡೆದ  ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳ ಫಲಿತಾಂಶವನ್ನು ದಿನಾಂಕ: 23-03-2022 ರಂದು ಅಪರಾಹ್ನ 4 ಗಂಟೆಗೆ ಮಂಡಳಿಯ ಜಾಲತಾಣ https://sslc.karnataka.gov.in      ನಲ್ಲಿ ಹಾಗೂ ಪರೀಕ್ಷಾ ಕೇಂದ್ರದ ಲಾಗಿನ್‍ನಲ್ಲಿ ದಿನಾಂಕ: 24-03-2022 ರಂದು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸೂಚಿಸಿದೆ. ಫಲಿತಾಂಶವನ್ನು ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ತರು ಪ್ರಕಟಣಾ ಫಲಕದಲ್ಲಿ ಪ್ರಕಟಿಸಲು ಸೂಚಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)