Mukthagangothri ಐ.ಎ.ಎಸ್/ಕೆ.ಎ.ಎಸ್ ಪರೀಕ್ಷೆಗಳಿಗೆ ತರಬೇತಿ

varthajala
0

ಬೆಂಗಳೂರು, ಮಾರ್ಚ್ 21 (ಕರ್ನಾಟಕ ವಾರ್ತೆ) :

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ  ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್, ಐ.ಪಿ.ಎಸ್, ಪರೀಕ್ಷೆಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ದಿನಾಂಕ: 29.03.2022 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ವಿಶ್ವವಿದ್ಯಾನಿಲಯದ ಕುಲಸಚಿವರಾದ  ಪ್ರೊ. ಆರ್. ರಾಜಣ್ಣ ಅವರು  ತಿಳಿಸಿದ್ದಾರೆ.  
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2515944 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)