ರಾಜ್ಯಮಟ್ಟದ 5 ದಿನಗಳ ಕಮ್ಮಟಕ್ಕಾಗಿ ಅರ್ಜಿ ಆಹ್ವಾನ

varthajala
0

 ಬೆಂಗಳೂರು, ಏಪ್ರಿಲ್ 29, (ಕರ್ನಾಟಕ ವಾರ್ತೆ) : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022 ರ ಜುಲೈ ತಿಂಗಳಿನಲ್ಲಿ “ಸ್ವಂತ ಸಾಹಿತ್ಯ ಅಧ್ಯಯನ ಶಿಬಿರ” ಎಂಬ ರಾಜ್ಯಮಟ್ಟದ 5 ದಿನಗಳ ಕಮ್ಮಟವನ್ನು ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತಿಯಿರುವ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 27, 2022 ರಂದು ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್  http://sahithyaacademy.karnataka.gov.in ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)