ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ

varthajala
0

 ಬೆಂಗಳೂರು, ಮೇ 07  (ಕರ್ನಾಟಕ ವಾರ್ತೆ) : ಕೋವಿಡ್-19 ಪ್ರಭಾವದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ್ದರಿಂದ ಸರಕಾರದ ಖರ್ಚು ವೆಚ್ಚಗಳನ್ನು ಸರಿದೂಗಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಆರ್ಥಿಕ ಇಲಾಖೆಯ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ವೇತನಾನುದಾನಕ್ಕೆ ಒಳಪಡಿಸಲು ನಿರ್ಭಂದ ವಿಧಿಸಿ ಸುತ್ತೋಲೆ ಸಂಖ್ಯೆ: ಆಇ:157 ವೆಚ್ಚ-08/2020 ದಿನಾಂಕ:10-04-2020ನ್ನು ಹೊರಡಿಸಿರುವದು ತಮಗೂ ಗೊತ್ತಿದೆ.

ದಿನಾಂಕ:21-12-2021ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ವಿಷಯ ನಂ: 3(ಎ)ದಲ್ಲಿ ಚರ್ಚಿಸಿದಂತೆ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ನಂತರ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ 1994-95ರ ನಂತರ ಪ್ರಾರಂಭಿಸಿದ ಶಿಕ್ಷಣ ಸಂಸ್ಥೆಗಳನ್ನು ವೇತನನಾನುದಾನಕ್ಕೆ ಒಳಪಡಿಸುವ ಪ್ರಕ್ರಿಯೆಗೆ ಚಾಲನೆ ನೀಡುವದು ಇಂದಿನ ತುರ್ತು ಅಗತ್ಯವಾಗಿದೆ. ಶಿಕ್ಷಣ ಇಲಾಖೆಯನ್ನು ಪದೇ ಪದೇ ಆರ್ಥಿಕ ಮಿತವ್ಯಯದ ವ್ಯಾಪ್ತಿಗೆ ತರುವದರಿಂದ ರಾಜ್ಯದ ಶಿಕ್ಷಣ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ.

ಬೆಳಗಾವಿಯಲ್ಲಿ 1994-95ರ ನಂತರ ಪ್ರಾರಂಭಿಸಿದ ಶಿಕ್ಷಣ ಸಂಸ್ಥೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ಶಿಕ್ಷಕರು ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದ್ದರಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದ್ದು, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ 1994-95ರ ನಂತರ ಪ್ರಾರಂಭಿಸಿದ ಶಿಕ್ಷಣ ಸಂಸ್ಥೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ವೈಯಕ್ತಿಕವಾಗಿ ಗಮನಹರಿಸಿ ಕ್ರಮಕೈಗೊಳ್ಳುವಂತೆ ಮಾನ್ಯ ಸಭಾಪತಿಗಳು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುವಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)