ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ ಜೂ.18ರಂದು

varthajala
0

ಬಳ್ಳಾರಿ,ಜೂ.16 : ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಜೂ.18ರಂದು ಬೆಳಗ್ಗೆ 10ಕ್ಕೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಮಯ ಕಚೇರಿಯ ಉದ್ಯೋಗಾಧಿಕಾರಿಗಳಾದ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೇಳದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಯಾವುದೇ ಪದವಿ ಹೊಂದಿರಬೇಕು. ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಮತ್ತು ಸ್ವ-ವಿವರ (RESUME) ಗಳೊಂದಿಗೆ ಬಳ್ಳಾರಿಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಭ್ಯರ್ಥಿಗಳು ಭಾಗವಹಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಜಿಲ್ಲಾ ಉದ್ಯೋಗ ವಿನಮಯ ಕಚೇರಿ ಹಾಗೂ ಮೊ.8073365184 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.


Tags

Post a Comment

0Comments

Post a Comment (0)