ನೂತನ ಲೋಕಾಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು

varthajala
0

ಬೆಂಗಳೂರು ಜೂನ್ 15.06.2022: ಕರ್ನಾಟಕ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.







ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ನೂತನ ಲೋಕಾಯುಕ್ತರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಕರ್ನಾಟಕ ಲೋಕಾಯುಕ್ತರಾಗಿ ನ್ಯಾ : ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಪ್ರಮಾಣವಚನ ಸ್ವೀಕರಿಸಿದೊಡನೆಯೇ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಲೋಕಾಯುಕ್ತರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿ, ಶುಭ ಹಾರೈಸಿದರು.

ವಸತಿ ಸಚಿವ ವಿ ಸೋಮಣ್ಣ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಶಾಸಕರಾದ ಬಸವರಾಜ ಪಾಟೀಲ್‌ ಯತ್ನಾಳ್‌, ಪಿ. ರಾಜೀವ್‌, ಕೆ. ಜೆ. ಜಾರ್ಜ್‌, ಎಂ. ಬಿ. ಪಾಟೀಲ್‌, ಈಶ್ವರ್‌ ಖಂಡ್ರೆ,  ಲೋಕಾಯುಕ್ತರಾಗಿ ಈ ಹಿಂದೆ ಸೇವೆ ಸಲ್ಲಿಸಿದ ಸಂತೋಷ್‌ ಹೆಗಡೆ ಮತ್ತು ಪಿ. ವಿಶ್ವನಾಥ್‌ ಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು, ಕರ್ನಾಟಕ ಉಚ್ಛ ನ್ಯಾಯಾಲಯವೂ ಒಳಗೊಂಡಂತೆ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳು, ವಕೀಲ ವೃಂದದ ಹಲವರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.

ಈ ಮುನ್ನ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರು ಕರ್ನಾಟಕ ಲೋಕಾಯುಕ್ತ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಹೊರಡಿಸಿರುವ ಅಧಿಸೂಚನೆಯನ್ನು ವಾಚಿಸಿದರು.

Governor administered the oath of office and secrecy to the new Lokayukta of Karnataka

Bengaluru June 15,2022: Justice Bhimanagouda Sanganagouda Patil was sworn in as the Lokayukta of Karnataka on Wednesday.

Hon'ble Governor of Karnataka Shri Thaawarchand Gehlot administered the oath of office to new Lokayukta Justice B.S.Patil at a ceremony in Raj Bhavan, Bengaluru.

The oath-taking ceremony was attended by Chief minister Basavaraj Bommai, Opposition leader Siddaramaiah, Basavaraja Patil Yatnal, P. Rajeev, K. J. George, M. B. Patil, Ishwar Khandre, Former Lokayukta Santhosh Hegde, P. Vishwanath Shetty and other dignitaries attended the program, and greeted Justice Patil.

Post a Comment

0Comments

Post a Comment (0)