ವಿದ್ಯಾರ್ಥಿಗಳ ರಿಯಾಯಿತಿ ಬಸ್‍ಪಾಸ್ ಅವಧಿ ವಿಸ್ತರಣೆ

varthajala
0

 ಬೆಂಗಳೂರು, ಜೂನ್ 28, (ಕರ್ನಾಟಕ ವಾರ್ತೆ) : 2021-22 ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು /ತರಗತಿಗಳು ನಡೆಯುತ್ತಿದ್ದಲ್ಲಿ ಅದನ್ನು ಖಾತ್ರಿಪಡಿಸಿಕೊಂಡು, ಒಂದು / ಎರಡು ತಿಂಗಳ ಅವಧಿಗೆ (ಜುಲೈ, ಆಗಸ್ಟ್ -2022) ನಿಗಧಿತ ಮೊತ್ತವನ್ನು ಪಾವತಿಸಿಕೊಂಡು ರಶೀದಿ ನೀಡುವುದು.

ವಿದ್ಯಾರ್ಥಿಗಳು ಕಡ್ಡಾಯವಾಗಿ ರಶೀದಿ ಮತ್ತು ಹಳೆಯ ಬಸ್‍ಪಾಸ್ ಎರಡನ್ನೂ ತೋರಿಸಿ ಪ್ರಯಾಣಿಸಬಹುದಾಗಿರುತ್ತದೆ. ಎಲ್ಲಾ ಚಾಲಕ / ನಿರ್ವಾಹಕ ಮತ್ತು ತನಿಖಾ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿ ನೀಡಿ, ದೂರುಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Tags

Post a Comment

0Comments

Post a Comment (0)