ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿಆಹ್ವಾನ

varthajala
0

 ಬೆಂಗಳೂರು, ಜೂನ್ 06 (ಕರ್ನಾಟಕ ವಾರ್ತೆ) : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಪ್ರತಿವರ್ಷದಂತೆ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ  ಅರಿವು ಶೈಕ್ಷಣಿಕ ಸಾಲ ಯೋಜನೆ,  ಟ್ಯಾಕ್ಸಿ/ಗೂಡ್ಸ್/ಪ್ಯಾಸೆಂಜರ್ ಆಟೋರಿಕ್ಷಾ ವಾಹನ ಖರೀದಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ  ಯೋಜನೆಗಳಲ್ಲಿ ಸಾಲ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಅಂದರೆ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿ ಜನಾಂಗದವರಿಂದ) ಆನ್ಲೈನ್ ಮೂಲಕಅರ್ಜಿಯನ್ನುಆಹ್ವಾನಿಸಿದೆ.

ಈ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು, ಸರ್ಕಾರಿ ಆದೇಶದಲ್ಲಿ ಸೂಚಿಸಿದಂತೆ ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿ ಯಾಗಿರಬೇಕು ಯೋಜನೆ ಸಂಬಂಧಿಸಿದಂತೆ ನಗರ ಪ್ರದೇಶದಲ್ಲಿ ವಾಸ ಮಾಡುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಹಾಗೂ ಗ್ರಾಮಾಮತರ ಪ್ರದೇಶದಲ್ಲಿ ವಾಸ ಮಾಡುವ ಕುಟುಂಬದ ವಾರ್ಷಿಕ ಆದಾಯ ಮತ್ತು ವಯಸ್ಸಿನ ಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷಗಳು.   ಶೇ. 33 ರಷ್ಟು ಮಹಿಳೆಯರಿಗೆ ಮೀಸಲಾತಿ ಇರುತ್ತದೆ,  ಶೇ.3 ರಷ್ಟುಅಂಗವಿಕಲರಿಗೆ ಮತ್ತು ಶೇ.2ರಷ್ಟು  ಮಾಜಿಸೈನಿಕರಿಗೆ ಮೀಸಲಾತಿ ಇರುತ್ತದೆ.

ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನಚೀಟಿ, ಬ್ಯಾಂಕ್ ಖಾತೆಪುಸ್ತಕಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಹಾಗೂ ಜಾಮೀನುದಾರರ 2 ಭಾವಚಿತ್ರಗಳು ಲಗತ್ತಿಸಿರಬೇಕು. ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಪುನಃ ಈ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ ಅರ್ಜಿದಾರರು ಕಡ್ಡಾಯವಾಗಿ  IಈSಅ  ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್  ಪ್ರತಿಯನ್ನು ಸಲ್ಲಿಸಬೇಕು.

ಆನ್ಲೈನ್  http://kmdconline.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:15/07/2022 ಆಗಿರುತ್ತದೆ. ಅರ್ಜಿಯ ಪ್ರತಿ ಹಾಗೂ ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ ದಿನಾಂಕ:15/07/2022ರೊಳಗಾಗಿಯೇ ಸಲ್ಲಿಸಬೇಕಾಗಿರುತ್ತದೆ.

ವಿಶೇಷ ಸೂಚನೆ : ಆನ್ಲೈನ್ ಅರ್ಜಿಗಳನ್ನು ದಿನಾಂಕ: 15/07/2022 ರೊಳಗೆ ಯಾವುದಾದರೂ ಸೈಬರ್ ಸೈಂಟರ್ನಲ್ಲಿ ಸಲ್ಲಿಸಿ, ಪ್ರಿಂಟ್ ತೆಗೆದು, ಅಗತ್ಯ ದಾಖಲಾತಿಗಳನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ)., ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗ,  ನಂ.40, 2ನೇ ಅಡ್ಡರಸ್ತೆ, ಇಯರಿಂಗ್ ಕ್ಲಿನಿಕ್ ಎದುರು,  ನೂರ್ ಮಸೀದಿಹತ್ತಿರ, 4ನೇ ಮುಖ್ಯರಸ್ತೆ, ವಸಂತಪ್ಪ ಬ್ಲಾಕ್, ಗಂಗಾನಗರ, ಬೆಂಗಳೂರು-560032. ಇಲ್ಲಿಗೆ ಸಲ್ಲಿಸಬೇಕು.


Tags

Post a Comment

0Comments

Post a Comment (0)