ಯುವಜನತೆ ಶ್ರೇಷ್ಠ ಭಾರತ ನಿರ್ಮಾಣದಲ್ಲಿ ಕೈಜೋಡಿಸಲು ರಾಜ್ಯಪಾಲರ ಕರೆ

varthajala
0

ಕೋಲಾರ ಜುಲೈ 15,2022: ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ಅಪ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಯೋಜನೆಗಳ ಸದುಪಯೋಗ ಪಡೆದುಕೊಂಡು ಯುವಜನತೆ ಶ್ರೇಷ್ಠ ಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.









ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಎರಡನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರುಯ

ದೇಶವು ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಎಂದು ಆಚರಿಸುತ್ತಿದೆ. ಸ್ವಾತಂತ್ರ್ಯ ಚಳವಳಿಯ ಇತಿಹಾಸದಂತೆ, 75 ವರ್ಷಗಳ ಪ್ರಯಾಣವು ಭಾರತೀಯರ ಕಠಿಣ ಪರಿಶ್ರಮ, ನಾವೀನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ. ಇಂದು ಭಾರತದ ಸ್ಟಾರ್ಟಪ್ ಪರಿಸರ ವ್ಯವಸ್ಥೆಯು ವಿಶ್ವದ ಆಕರ್ಷಣೆಯ ಕೇಂದ್ರವಾಗಿದೆ ಎಂದು ಹೇಳಿದರು.

ಮಕ್ಕಳು ಮತ್ತು ಯುವಕರ ಭವಿಷ್ಯಕ್ಕೆ ಸರಿಯಾದ ಮಾರ್ಗವನ್ನು ತೋರಿಸಲು ಮತ್ತು ದೇಶದಲ್ಲಿ ಅಂತರ್ಗತ ಅಭಿವೃದ್ಧಿಯನ್ನು ಉತ್ತೇಜಿಸಲು ಅಂತರ್ಗತ ಶಿಕ್ಷಣ ವ್ಯವಸ್ಥೆಗೆ ಒತ್ತು ನೀಡಬೇಕು, ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನ ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದರ ಜೊತೆಗೆ ಮಾನವೀಯ ಮೌಲ್ಯಗಳು, ಪರಿಸರ ಮತ್ತು ಜಲ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಯುವಕರು ಈ ದೇಶದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಭಾಗವಾಗಿದ್ದೀರಿ. ಡಿಜಿಟಲ್ ಇಂಡಿಯಾ, ಸ್ಟಾರ್ಟ್ ಅಪ್ ಸೇರಿದಂತೆ ಅನೇಕ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು. ಅಲ್ಲದೇ ಉದ್ಯೋಗ ಅರಸುವ ಬದಲು ಉದ್ಯೋಗ ನೀಡುವಂತವರಾಗಬೇಕು. ಈ ಮೂಲಕ ಶ್ರೇಷ್ಠ ಭಾರತ, ನವ ಭಾರತ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಬಹುದು ಎಂದು ಅವರು ತಿಳಿಸಿದರು.

ಚಲನಚಿತ್ರ ಹಿರಿಯ ನಟ ಅನಂತನಾಗ್ ಅವರ ಅನುಪಸ್ಥಿತಿಯಲ್ಲಿ ಹಾಗೂ ಸಂಗೀತ ಕ್ಷೇತ್ರದ ಬಲ್ಲೇಶ್ ಬಜೇಂತ್ರಿ ಮತ್ತು ಐಟಿ ಕ್ಷೇತ್ರದಲ್ಲಿ ಕೊಡುಗೆ ನೀಡಿರುವ ಶರತ್ ಶರ್ಮಾ ಅವರುಗಳಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಿದರು. ಗೌರವ ಡಾಕ್ಟರೇಟ್ ಸ್ವೀಕರಿಸಿದ ಮಹನೀಯರು ಮಕ್ಕಳಿಗೆ ಸ್ಪೂರ್ತಿಯಾಗಿರುವುದರ ಜೊತೆಗೆ ಸಾಮಾಜಿಕ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳು ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ ಎನ್ ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಘಟಿಕೋತ್ಸವದ ಭಾಷಣ ಮಾಡಿದರು.

ಸಮಾರಂಭದಲ್ಲಿ ಕುಲಪತಿಗಳಾದ ನಿರಂಜನ್, ಸಿಂಡಿಕೋಟ್ ಸದಸ್ಯರು ಸೇರಿದಂತೆ ಮುಂತಾದ ಗಣ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. 

Post a Comment

0Comments

Post a Comment (0)