ರೈತ ಹಾಗೂ ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

varthajala
0

ಬೆಂಗಳೂರು, ಜುಲೈ 05 (ಕರ್ನಾಟಕ ವಾರ್ತೆ) :  ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ತನ್ನ ಆಡಳಿತದ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ ರಾಜ್ಯ ಮಟ್ಟದ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ  ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. 

 ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ, ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿ, ಕೆನರಾ ಬ್ಯಾಂಕ್ ಪ್ರಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ/ರೈತಮಹಿಳೆ ಪ್ರಶಸ್ತಿ ಈ ಪ್ರಶಸ್ತಿಗಳು ರಾಜ್ಯ ಮಟ್ಟದ ಪ್ರಶಸ್ತಿಗಳಾಗಿವೆ. 

ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ, ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ ಇವು ಜಿಲ್ಲಾ ಮಟ್ಟದ ಪ್ರಶಸ್ತಿಗಳಾಗಿವೆ. ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ, ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ ಇವು ತಾಲ್ಲೂಕು ಮಟ್ಟದ ಪ್ರಶಸ್ತಿಗಳಾಗಿವೆ.

ಈ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಅಕ್ಟೋಬರ್ ತಿಂಗಳಲ್ಲಿ ಆಯೋಜಿಸಲಿರುವ ಕೃಷಿಮೇಳ-2022ರ  ಸಂದರ್ಭದಲ್ಲಿ ನೀಡಲಾಗುತ್ತದೆ.  ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಛೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ - ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ -ಮಾಗಡಿ, ಕಂದಲಿ - ಹಾಸನ, ಕೊನೇಹಳ್ಳಿ - ತಿಪಟೂರು, ವಿ.ಸಿ.ಫಾರಂ - ಮಂಡ್ಯ, ಕುರುಬೂರು ಫಾರಂ - ಚಿಂತಾಮಣಿ ಮತ್ತು ಹರದನಹಳ್ಳಿ - ಚಾಮರಾಜನಗರ) ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ -ಮೈಸೂರು)ದಲ್ಲಿ ದೊರೆಯುತ್ತದೆ. 

ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.uasbangalore.edu.in ನಲ್ಲಿ ಲಭ್ಯವಿರುತ್ತದೆ.  ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜುಲೈ 31, 2022 ಕೊನೆಯ ದಿನಾಂಕವಾಗಿದೆ.

 ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560 065 ಹಾಗೂ  ದೂರವಾಣಿ ಸಂಖ್ಯೆ.  080-23330153 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)