ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

varthajala
0

 ಬೆಂಗಳೂರು, ಜುಲೈ 07 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಬೆಂಗಳೂರು ತರಬೇತಿ ಸಂಸ್ಥೆಯನ್ನು ನಡೆಸುತ್ತಿದ್ದು, ಈ ತರಬೇತಿ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ / ಸಹಕಾರ ಇಲಾಖೆ / ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ “6 ತಿಂಗಳು / 180 ದಿನಗಳ’’ ಅವಧಿಯ "ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಜುಲೈ 01 ರಿಂದ ಪ್ರಾರಂಭಿಸಲಾಗುತ್ತಿದೆ. ತರಬೇತಿಯನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿಯನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಸಹಕಾರ ಸಂಘ / ಸಹಕಾರ ಇಲಾಖೆ / ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇಕಡ 18ರಷ್ಟು ಮೀಸಲಿರಿಸಲಾಗಿರಬೇಕು.

ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಇಂತಹ ಅಭ್ಯರ್ಥಿಗಳು ಮಾತ್ರ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದು. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.400/-ಗಳ ಶಿಷ್ಯವೇತನವನ್ನು ನೀಡಲಾಗುವುದು.

ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 6 ತಿಂಗಳು / 180 ದಿನಗಳ ವಿಶೇಷ “ಡಿಪೆÇ್ಲಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್" ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಿಂದ ತರಿಸಿಕೊಳ್ಳಲಾಗುವುದು ಮತ್ತು ಈ ವರ್ಗದ ಅಭ್ಯರ್ಥಿಗಳು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರವರ ಮೂಲಕ ಅರ್ಜಿಗಳನ್ನು ಜುಲೈ 15, 2022 ರೊಳಗಾಗಿ ಸಲ್ಲಿಸಬೇಕು.

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500/ ಶಿಷ್ಯವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಪ್ರಾಂಶುಪಾಲರು, ಕೆ.ಐ.ಸಿ.ಎಂ, ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ 1/3, 2ನೇ ಮಹಡಿ, 3ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-560018 ಇಲ್ಲಿಗೆ ಸಲ್ಲಿ¸ಬೇಕು.

 ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26602046, 9902189872, 9036259781,

8550017134, 6364991786 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)