ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

varthajala
0

ಬೆಂಗಳೂರು, ಜುಲೈ 07 (ಕರ್ನಾಟಕ ವಾರ್ತೆ) : ಕರ್ನಾಟಕ ಜಾನಪದ ಅಕಾಡೆಮಿಯು ದಿನಾಂಕ : 01-01-2021 ರಿಂದ 31-12-2021 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪರ ವಿಚಾರ – ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

ಲೇಖಕರು / ಪ್ರಕಾಶಕರು / ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಜುಲೈ 31 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags

Post a Comment

0Comments

Post a Comment (0)