“ಕನ್ನಡ ರಥ – ಕಾಯಕ ರಥ” ಪುಸ್ತಕಗಳ ಲೋಕಾರ್ಪಣೆ

varthajala
0

ಬೆಂಗಳೂರು, ಜುಲೈ 06 (ಕರ್ನಾಟಕ ವಾರ್ತೆ) :  ಕನ್ನಡ ಅಭಿವೃದ್ಧಿ ಪ್ರಾಧಿಕಾರವು ‘30’ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಜುಲೈ 08, 2022ರ ಸಂಜೆ 05.00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕ.ಅ.ಪ್ರಾ - 3 ದಶಕ’ ಸಮಾರಂಭವನ್ನು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಸಮಾರಂಭವನ್ನು ಉದ್ಘಾಟನೆ ಮಾಡುವುದರೊಂದಿಗೆ ‘ಕನ್ನಡ ರಥ - ಕಾಯಕ ಪಥ, ಪುಸ್ತಕ ಲೋಕಾರ್ಪಣೆ ಮಾಡಲಿರುವರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ರವರು ಚಿಣ್ಣರ ಸಾಹಿತ್ಯ ಮಾಲೆ ಪುಸ್ತಕಗಳು ಹಾಗೂ ಕಾಯಕ ವರ್ಷದ ಅಕ್ಷರ ದಾಸೋಹ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಜೆ.ಸಿ. ಮಾಧುಸ್ವಾಮಿ, ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವರಾದ ಜೆ.ಸಿ. ಮಾಧುಸ್ವಾಮಿ ರವರು ವೈದ್ಯಕೀಯ ವಲಯದಲ್ಲಿ ಕನ್ನಡ ಬಳಕೆ, ಆಡಳಿತ ಕನ್ನಡ ಕೌಶಲ್ಯಾಭಿವೃದ್ಧಿ ಕೈಪಿಡಿ, ಕಾಯಕ ಕಮ್ಮಟ ಸಾರ ಹಾಗೂ ಉದ್ಯೋಗ ಕೈಪಿಡಿ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. 

ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಟಿ.ಎಸ್. ನಾಗಾಭರಣ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಬಿ ಗರುಡಾಚಾರ್, ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ. ಮೋಹನ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಹಿರಿಯ ಸಾಹಿತಿಗಳು ಆದ ಡಾ. ದೊಡ್ಡರಂಗೇಗೌಡರು, ಹಿರಿಯ ಕವಿಗಳು ಆದ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಹಾಗೂ ಡಾ. ಎನ್. ಮಂಜುಳ, ಭಾ.ಆ.ಸೇ., ಸರ್ಕಾರದ ಕಾರ್ಯದರ್ಶಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ. ಸಂತೋಷ ಹಾನಗಲ್ಲ, ಮಾನ್ಯ ಅಧ್ಯಕ್ಷರ ಆಪ್ತಕಾರ್ಯದರ್ಶಿಗಳಾದ ಎನ್. ಮಹೇಶ್ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರು, ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ಮಹಾನಗರ ಪಾಲಿಕೆ ಕನ್ನಡ ಜಾಗೃತಿ ಸಮಿತಿಗಳ ಸದಸ್ಯರು, ಸಾಹಿತಿಗಳು, ಗಣ್ಯರು ಭಾಗವಹಿಸಲಿದ್ದಾರೆ.

 


Tags

Post a Comment

0Comments

Post a Comment (0)