ಉದ್ಯೋಗ ಮೇಳ

varthajala
0

ಬೆಂಗಳೂರು, ಜುಲೈ 11 (ಕರ್ನಾಟಕ ವಾರ್ತೆ) : ಸೌಂದರ್ಯ ಇನ್ಸ್‍ಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಅಂಡ್ ಸೈನ್ಸ್, ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಷನ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕೆ.ಜಿ. ರಸ್ತೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಒದಗಿಸುವ ದೃಷ್ಠಿಯಿಂದ ಹಲವು ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ: 12-07-2022ರಂದು ಬೆಳಿಗ್ಗೆ 10 ಗಂಟೆಯಿಂದ   ಸಂಜೆ 4 ಗಂಟೆಯವರೆಗೆ ಬೃಹತ್ ಉದ್ಯೋಗ ಮೇಳವನ್ನು ಸೌಂದರ್ಯ ಇನ್ಸ್‍ಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಅಂಡ್ ಸೈನ್ಸ್, ಸಿಡೇದಹಳ್ಳಿ ನಾಗಸಂದ್ರ ಪೋಸ್ಟ್, ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.


ಉದ್ಯೋಗ ಮೇಳದಲ್ಲಿ ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣ / ಅನುತ್ತೀರ್ಣ, ಪಿ.ಯು.ಸಿ (ಎಲ್ಲಾ ಟ್ರೇಡ್‍ಗಳು), ಡಿಪ್ಲಮೋ, ಸಾಮಾನ್ಯ ಪದವೀಧರರು ಹಾಗೂ ಸ್ನಾತಕೊತ್ತರ ಪದವಿ ಪಡೆದು ತೇರ್ಗಡೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ತಮ್ಮ ವೈಯಕ್ತಿಕ ವಿವರಗಳುಳ್ಳ (ಬಯೋಡಟಾ) ಪ್ರತಿಗಳೊಂದಿಗೆ ಪಾಲ್ಗೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರ, ಏಷ್ಯಾಟಿಕ್ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ ಬೆಂಗಳೂರು, ದೂರವಾಣಿ ಸಂ. 080-22374582 ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)