ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನ

varthajala
0

ಬೆಂಗಳೂರು, ಜುಲೈ 04 (ಕರ್ನಾಟಕ ವಾರ್ತೆ) : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ - ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ  16 ರಿಂದ 24  ವರ್ಷ ವಯೋಮಾನದ  ಒಳಗಿರುವ  ಅಭ್ಯರ್ಥಿಗಳಿಗೆ 2022-23ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10,000-00 ಗಳನ್ನು ಶಿಷ್ಯವೇತನವಾಗಿ ನೀಡಲಾಗುವುದು.  ಒಬ್ಬ ಅಭ್ಯರ್ಥಿ ಒಮ್ಮೆ ಮಾತ್ರ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಅಕಾಡೆಮಿಯ ಕಛೇರಿ ವೇಳೆಯಲ್ಲಿ (ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆವರೆಗೆ) ಉಚಿತವಾಗಿ ಪಡೆಯಬಹುದು.  ಅಕಾಡೆಮಿ ಅಂರ್ತಜಾಲ ತಾಣhttps://sangeetanrityaacademy.karnataka.gov.in ಮೂಲಕ ಪಡೆದು ಸಲ್ಲಿಸಬಹುದಾಗಿದೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಹೆಸರಿನ ಫೇಸ್‍ಬುಕ್ ಪುಟದಲ್ಲೂ ಅರ್ಜಿಗಳನ್ನು ಪಡೆಯಬಹುದಾಗಿದೆ

ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ.

 ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ರೂ.10-00 (ರೂಪಾಯಿ ಹತ್ತುಗಳು ಮಾತ್ರ) ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಇಲ್ಲಿಗೆ ಕಳುಹಿಸಿ ಕೊಡಬೇಕು

ಭರ್ತಿಮಾಡಿದ  ಅರ್ಜಿಗಳನ್ನು ಸಲ್ಲಿಸಲು ಕೊನೆಯ ಜುಲೈ 25, 2022. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.



Tags

Post a Comment

0Comments

Post a Comment (0)