ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ - SHIKSHANA RATNA

Breaking

Post Top Ad

Responsive Ads Here

Monday, 19 September 2022

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಸೆಪ್ಟೆಂಬರ್ 19 (ಕರ್ನಾಟಕ ವಾರ್ತೆ):   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2022-23ನೇ ಸಾಲಿಗೆ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭಿಸಿದ್ದು, ಇದರಲ್ಲ್ಲಿ ಈ ಹಿಂದಿನ ವರ್ಷಗಳಲ್ಲಿ ಸಾಂಪ್ರದಾಯಿಕ ವಿವಿಗಳಲ್ಲಿ ಸ್ನಾತಕ / ಸ್ನಾತಕೋತ್ತರ ಪದವಿಗಳನ್ನು ವ್ಯಾಸಂಗ ಮಾಡುತ್ತಿದ್ದು, ಅನಿವಾರ್ಯ ಕಾರ್ಯಗಳಿಂದಾಗಿ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿರುವ ವಿದ್ಯಾರ್ಥಿಗಳಿಗೆ ತಾವು ಅರ್ಧಕ್ಕೆ ನಿಲ್ಲಿಸಿದ್ದ ಕೋರ್ಸ್‍ಗೆ ಅಗತ್ಯ ದಾಖಲಾತಿಗಳನ್ನು ಒದಗಿಸಿ ಮುಂದಿನ ವರ್ಷಕ್ಕೆ ನೇರ ಪ್ರವೇಶಾತಿಯನ್ನು ಕರಾಮುವಿಯಲ್ಲಿ ಪಡೆಯಲು ಅವಕಾಶವನ್ನು ನೀಡಲಾಗಿದೆ.

ಅರ್ಹ ವಿದ್ಯಾರ್ಥಿಗಳು ಕರಾಮುವಿಯು ನೀಡಿರುವ ಸದಾವಕಾಶವನ್ನು ಸದ್ಭಳಕೆ ಮಾಡಿಕೊಳ್ಳಬಹುದಾಗಿದೆ.

ಪ್ರವೇಶಾತಿಗೆ ಪ್ರಾರಂಭವಾಗಿರುವ ಕೋರ್ಸ್‍ಗಳು ಬಿ.ಎ., ಬಿ.ಕಾಂ., ಬಿ.ಎಸ್‍ಸಿ., ಬಿಬಿಎ, ಬಿ.ಲಿಬ್.ಐ.ಎಸ್ಸಿ, ಎಂ.ಎ., ಎ.ಕಾಂ., ಎಂ.ಬಿ.ಎ., ಎಂ.ಎಸ್ಸಿ, ಎಂ.ಲಿಬ್.ಐ.ಎಸ್ಸಿ., ಪಿಜಿ ಡಿಪ್ಲೋಮೊ, ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ತರು, ಗೃಹಿಣಿಯರು ಇದರ ಸದುಪಯೋಗ ಪದುಕೊಳ್ಳಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ದಿಲೀಪ. ಡಿ ಅವರು ಪ್ರಕಟಣೆಯಲ್ಲಿ ತಿರಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-560028, ದೂರವಾಣಿ ಸಂಖ್ಯೆ: 080-2660 3664 ಹಾಗೂ 9844965515 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

No comments:

Post a Comment

Post Bottom Ad

Responsive Ads Here

Pages