ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

varthajala
0

ಬೆಂಗಳೂರು, ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಬ್ಯಾಕ್‍ಲಾಗ್‍ನ 155 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ವಯೋಮಿತಿ / ವಿದ್ಯಾರ್ಹತೆ ಆಧಾರದ ಮೇರೆಗೆ ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಧ್ಯಕ್ಷರು, ಪರಿಶಿಷ್ಟ ಜಾತಿ ಬ್ಯಾಕ್‍ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಆಯ್ಕೆ ಸಮಿತಿ ಹಾಗೂ ಮುಖ್ಯ ಇಂಜಿನಿಯರ್, ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆ, ಬೆಂಗಳೂರು ಇವರು ಸೆಪ್ಟೆಂಬರ್ 23, 2022ರಂದು ರಾಜ್ಯ ಪತ್ರದಲ್ಲಿ (ಗೆಜೆಟ್) ಮತ್ತು ಜಲಸಂಪನ್ಮೂಲ ಇಲಾಖೆಯ ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸೆಪ್ಟೆಂಬರ್ 26, 2022ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 25, 2022ರ ಸಂಜೆ 5.30 ಗಂಟೆಯ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅಭ್ಯರ್ಥಿಗಳು ಜಲಸಂಪನ್ಮೂಲ ಇಲಾಖೆಯ ಜಾಲತಾಣ https://waterresources.karnataka.gov.in  ನ್ನು ವೀಕ್ಷಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)