ಉದ್ಯೋಗ ಮೇಳ

varthajala
0

ಬೆಂಗಳೂರು, ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ) : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೆ.ಆರ್. ಪುರಂ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ. ರಸ್ತೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಒದಗಿಸುವ ದೃಷ್ಠಿಯಿಂದ ಹಲವು ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಸೆಪ್ಟೆಂಬರ್ 08, 2022ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ.ಆರ್.ಪುರಂ ಇಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.


ಈ ಮೇಳದಲ್ಲಿ ಐ.ಟಿ.ಐ (ಎಲ್ಲಾ ಟ್ರೇಡ್‍ಗಳು), ಡಿಪ್ಲೋಮ, ಸಾಮಾನ್ಯ ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ತಮ್ಮ ವೈಯಕ್ತಿಕ ವಿವರಗಳುಳ್ಳ ಬಯೋಡಟಾದ ಹಲವು ಪ್ರತಿಗಳೊಂದಿಗೆ ಪಾಲ್ಗೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂ. 91480 28116, 96329 07035ಮತ್ತು 91415 55520 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)