ಕನ್ನಡ ಸಾಹಿತ್ಯ ಪರಿಷತ್ತಿನ ೨೦೨೨ನೇ ಸಾಲಿನʻಕನ್ನಡ ಕಾಯಕ ದತ್ತಿ ಪ್ರಶಸ್ತಿʼ ಪ್ರಕಟ

varthajala
0

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೨ನೇ ಸಾಲಿನ ʻಕನ್ನಡ ಕಾಯಕ ದತ್ತಿ ಪ್ರಶಸ್ತಿʼ ಪ್ರಕಟಿಸಲಾಗಿದೆ ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿಉತ್ತರ ಕನ್ನಡ ಜಿಲ್ಲೆಯ ಶಿರಸಿ  ಶ್ರೀ ಶಿವಾನಂದ ಕಳವೆ ಹಾಗೂ ಹೆಲನ್‌ ಮೈಸೂರು ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿಗಳಾದ ಶ್ರೀ ವ.ಚನ್ನೇಗೌಡ ಆವರು ಪರಿಷತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಿಗೆ ನೀಡುವ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ರೂಪದಲ್ಲಿ ಇಡಲಾಗಿದೆ. ದತ್ತಿ ದಾನಿಗಳ ಆಶಯದಂತೆ ಕನ್ನಡ ಪರ ಹೋರಾಟ ಮಾಡುತ್ತ ನಾಡು ನುಡಿಗೆ ಸೇವೆ ಸಲ್ಲಿಸಿದವರುನೆಲಜಲ ಕುರಿತು ಕೃತಿ ರಚಿಸಿದವರು ಹಾಗೂ ಕನ್ನಡ ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದಈ ಮೂವರು ಗಣ್ಯರಿಗೆ ʻ ಕನ್ನಡ ಕಾಯಕ ದತ್ತಿʼ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆಪ್ರಶಸ್ತಿಯು ತಲಾ ೧೦,೦೦೦ (ಹತ್ತು ಸಾವಿರ) ರೂ. ನಗದುಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾಮಹೇಶ ಜೋಶಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠದ ಶ್ರೀಗಳಾದ ಶ್ರೀ  ಪ್ರಭು ಚನ್ನಬಸವ ಸ್ವಾಮೀಜಿ ಅವರು ಗಡಿನಾಡಿನಲ್ಲಿ ಕನ್ನಡ ಉಳಿಸಿ ಬೆಳೆಸುವುದಕ್ಕಾಗಿ ಸಮಾಜಸೇವಾ ದೀಕ್ಷೆಯೊಂದಿಗೆ ಸಾಹಿತ್ಯ ರಚನೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದು. 'ಅಥಣೀಶಎಂಬ ಕಾವ್ಯನಾಮದಲ್ಲಿ ಕೃತಿಗಳನ್ನು ರಚಿಸಿ ಪರಿಚಿತರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿವಾನಂದ ಕಳವೆ ಅವರು ಪರಿಸರ ಸಂರಕ್ಷಣೆ ಕುರಿತು ,  ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕೇಂದ್ರದಲ್ಲಿ ವಿವಿಧ ಶಿಬಿರಗಳನ್ನು ಏರ್ಪಡಿಸುವುದರ ಜೊತೆ ಸಾಹಿತ್ಯ ಕೃಷಿಯಲ್ಲಿಯೂ ಗುರುತಿಸಿಕೊಂಡಿದ್ದಾರೆಕನ್ನಡ ರಂಗಭೂಮಿಯಲ್ಲಿ ಕಳೆದ ೫ ದಶಕಗಳಿಂದ ನಿರಂತರ ತೊಡಗಿಸಿಕೊಂಡ ಹೆಲನ್‌ ಮೈಸೂರು ಅವರು ಆಧುನಿಕ ರಂಗಭೂಮಿಯಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಿ ಕನ್ನಡದ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದಾರೆ೨೦೨೨ನೇ ಸಾಲಿನ ʻಕನ್ನಡ ಕಾಯಕ ದತ್ತಿʼ ಪ್ರಶಸ್ತಿಗಾಗಿ ಅರ್ಹರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾಮಹೇಶ ಜೋಶಿ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ. ಭ ರಾಮಲಿಂಗಶೆಟ್ಟಿಡಾಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ. ಎಂ. ಪಟೇಲ್‌ಪಾಂಡು ಅವರು ಉಪಸ್ಥಿತರಿದ್ದರು.


Post a Comment

0Comments

Post a Comment (0)