ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭ

varthajala
0

ಬೆಂಗಳೂರು, ಜೂನ್ 03, (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಜೂನ್ 8 ರಂದು ಪ್ರಾರಂಭಿಸಲಾಗುತ್ತಿದೆ.

ಆಸಕ್ತರು ಜೂನ್ 7 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೈಸೂರಿನಲ್ಲಿರುವ ಕೇಂದ್ರ ಕಛೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿ ತರಬೇತಿ ಪಡೆಯಬಹುದಾಗಿದೆ.
 ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821-2515944 / 9964760090  ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)