ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ, ವಿಶೇಷ ಪೂಜೆ, ಅನ್ನದಾನ ಸೇವೆ ರಥೋತ್ಸವ, ಭರತನಾಟ್ಯ

varthajala
0

ಬೆಂಗಳೂರು : ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಡಿ. 7 ರಂದು ಬೆಳಿಗ್ಗೆ ವಿಶೇಷ ಪೂಜೆಗಳು, ಅನ್ನದಾನ ಸೇವೆ, ಮಹಾಮಂಗಳಾರತಿ ಜರುಗಿದವು. 

ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ, ಮಹಾಮಂಗಳಾರತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಡಾ|| ಸುಪರ್ಣ ವೆಂಕಟೇಶ್ ಅವರ ಶ್ರೀ ಸಾಯಿ ಆಟ್ಸ್೯ ಇಂಟರ್ನ್ಯಾಷನಲ್  ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಏರ್ಪಡಿಸಲಾಗಿತ್ತು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದರು.

Post a Comment

0Comments

Post a Comment (0)