ರಾಮನಗರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

varthajala
0

ರಾಮನಗರ ಜನವರಿ 18: 'ನಮ್ಗೆ ಬಸ್ ಬೇಕು ಸರ್... ಬಸ್ ಇಲ್ದೆ ಕಾಲೇಜಿಗೆ ಹೇಗೆ ಹೋಗೋದು' ಎಂದು ರಾಮನಗರ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಮನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಬೆಂಗಳೂರು ಕಡೆಗೆ ಹೋಗಲು ನಿತ್ಯ ಎರಡು ಗಂಟೆಗೂ ಹೆಚ್ಚು ಸಮಯ ವಿದ್ಯಾರ್ಥಿಗಳು ಕಾಯಬೇಕು. ಇಂದು ಬೆಳ್ಳಂಬೆಳಿಗ್ಗೆ ಕಾಲೇಜಿಗೆ ಹೋಗಬೇಕಾಗಿದ್ದ ವಿದ್ಯಾರ್ಥಿಗಳು ಬಸ್ ಇಲ್ದೆ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ವಿದ್ಯಾರ್ಥಿಗಳು ಆಕ್ರೋಶಗೊಂಡು ಬಸ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಿದ್ದಾರೆ. ಕಾಲೇಜಿಗೆ ತೆರಳಲು ಸಮರ್ಪಕವಾಗಿ ಬಸ್ ಇಲ್ಲದೆ ನಿತ್ಯ ವಿದ್ಯಾರ್ಥಿಗಳು ಅವರಿವರ ಬಳಿ ಡ್ರಾಪ್ ಕೇಳುವಂತ ಪರಿಸ್ಥಿತಿ ಇದೆ. ಹೀಗಾಗಿ ವಿದ್ಯಾರ್ಥಿಗಳು ಇಂದು ರಾಮನಗರ ಬಸ್ ನಿಲ್ದಾಣದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು.



ಈಗಾಲೇ ಬಸ್ ವ್ಯವಸ್ಥೆ ಸರಿಪಡಿಸುವಂತೆ ಹತ್ತಾರು ಬಾರಿ ಪ್ರತಿಭಟನೆ ನಡೆಸಿದ್ದರು ಎಚ್ಚರವಾಗದ ಸಾರಿಗೆ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲ್ಲಾ ಉಸ್ತುವಾರಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮಸ್ಯೆ ಬಗೆಹರಿಸುವ ಮಾತು ನೀಡಿ ತಿಂಗಳು ಕಳೆದರು ಪರಿಹಾರ ನೀಡಿಲ್ಲ. ಬಸ್ ಸಮಸ್ಯೆ ಇಂದಿಗೂ ಇದೆ ಎಂದು ವಿದ್ಯಾರ್ಥಿಗಳು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಇದರಿಂದಾಗಿ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಕೆಲವು ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಬಸ್ ಹತ್ತಲು ಅವಕಾಶ ಕೊಡುವುದಿಲ್ಲ. ಇದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಈ ವೇಳೆ ರಸ್ತೆ ತಡೆ ಮಾಡಿದ್ದಕ್ಕೆ ರಾಮನಗರ ಸಂಚಾರಿ ಠಾಣೆ ಪಿಎಸ್‌ಐ ಗರಂ ಆದರು. ನಿಮ್ಮ ಸಮಸ್ಯೆ ಬಗೆಹರಿಸೋಣ ಆದರೆ ರಸ್ತೆ ತಡೆ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಖಾಕಿ ಕಟ್ಟುನಿಟ್ಟು ಮಾಡಿತು. ಕೊನೆಗೆ ವಿದ್ಯಾರ್ಥಿಗಳು ಪಿಎಸ್‌ಐ ಮಾತಿಗೆ ಒಪ್ಪಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.


Post a Comment

0Comments

Post a Comment (0)