ಕರಾಮುವಿ - ಪಿಯು-ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ತರಬೇತಿ

varthajala
0
ಬೆಂಗಳೂರು, ಮಾರ್ಚ್ 18 (ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ವಿಜಯ ವಿಠ್ಠಲ ವಿದ್ಯಾಸಂಸ್ಥೆ ಸಹಯೋಗದೊಂದಿಗೆ ಪಿಯು ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಿಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 19 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರಾಮುವಿ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದೆ.

2024ರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ಪಿಯು-ಸಿಇಟಿ ಮತ್ತು ನೀಟ್ ಪರೀಕ್ಷಾ ತರಬೇತಿ ಶಿಬಿರದ ಉದ್ಘಾಟನೆಯನ್ನು ವಿಜಯ ವಿಠ್ಠಲ ವಿದ್ಯಾಸಂಸ್ಥೆಗಳ ಗೌರವ ಕಾರ್ಯದರ್ಶಿ ಆರ್. ವಾಸುದೇವ ಭಟ್ ಅವರು ನೆರವೇರಿಸಲಿರುವರು. ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪೆÇ್ರ. ಕೆ. ಸಿದ್ದಪ್ಪ ಅವರು ಮುಖ್ಯ ಭಾಷಣ ಮಾಡಲಿರುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸಿ ಶುಭಹಾರೈಸುವರು. ಕುಲಸಚಿವ . ಕೆ.ಬಿ. ಪ್ರವೀಣ, ಆಂತರಿಕ ಗುಣಮಟ್ಟ ಆಶ್ವಾಸನಾ ಕೇಂದ್ರದ (ಸಿ.ಐ.ಕ್ಯೂ.ಎ) ನಿರ್ದೇಶಕ ಡಾ. ಎಸ್. ನಿರಂಜನ್ ರಾಜ್, ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್ ಉಪಸ್ಥಿತರಿರುವರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)