ತೃತೀಯ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರದಾನಕ್ಕಾಗಿ ಅರ್ಜಿ ಆಹ್ವಾನ

varthajala
0

 ಬೆಂಗಳೂರು, ಏಪ್ರಿಲ್ 18 (ಕರ್ನಾಟಕ ವಾರ್ತೆ):  ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಮತ್ತು ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2020ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ (ಯು.ಜಿ) ಮತ್ತು 2021ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ (ಪಿ.ಜಿ.) ವ್ಯಾಸಂಗದ ಪ್ರವೇಶ ಪಡೆದು ಎಲ್ಲಾ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ತೃತೀಯ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರಧಾನ ಮಾಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳಿಗೆ ಏಪ್ರಿಲ್ 10 ರಿಂದ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 24 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ವಿವರಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ https://www.bcu.ac.in/ ನಿಂದ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)