ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ

varthajala
0

 ಬೆಂಗಳೂರು, ಏಪ್ರಿಲ್ 19 (ಕರ್ನಾಟಕ ವಾರ್ತೆ):

ಕರ್ನಾಟಕ ಲೋಕ ಸೇವಾ ಆಯೋಗವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022ರನ್ವಯ ವಿವಿಧ ಇಲಾಖೆಗಳ   ಗ್ರೂಪ್   - ಬಿ ವೃಂದದ 277 ಹಾಗೂ ಹೈದ್ರಾಬಾದ್ ಕರ್ನಾಟಕದಡಿ 50 ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.


ಅರ್ಜಿಗಳನ್ನು 2024ನೇ ಏಪ್ರಿಲ್ 15 ರಿಂದ ಸಲ್ಲಿಸಬಹುದಾಗಿದ್ದು, ಮೇ 14 ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನವಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡುವ ವಿಧನ, ಶುಲ್ಕ ಪಾವತಿ, ಹುದ್ದೆಗಳ ವರ್ಗೀಕರಣ, ವಿದ್ಯಾರ್ಹತೆ, ವಯೋಮಿತಿ, ಇತ್ಯಾದಿ ಹೆಚ್ಚಿನ ವಿವರಗಳಿಗಾಗಿ 2024ರ ಮಾರ್ಚ್ 13ರ ಆಯೋಗದ ಅಧಿಸೂಚನೆಯಲ್ಲಿ ಲಭ್ಯವಿರುವ ಮಾಹಿತಿಗಳನ್ನು ಜಾಲತಾಣ http://kpsc.kar.nic.in/Notification ನಲ್ಲಿ ನೋಡಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದೆ.  

Post a Comment

0Comments

Post a Comment (0)