ಬೆಂಗಳೂರು, ಮಾರ್ಚ್ 01 (ಕರ್ನಾಟಕ ವಾರ್ತೆ) : ಕರ್ನಾಟಕ ಲೋಕಸೇವಾ ಆಯೋಗವು ಹೈ.ಕ.ವೃಂದದಲ್ಲಿ ಅಧಿಸೂಚಿಸಿರುವ ಹುದ್ದೆಗಳ ಸ್ಫರ್ಧಾತ್ಮಕ ಪರೀಕ್ಷೆಗಳನ್ನು ವಿವಿಧ ದಿನಾಂಕಗಳಂದು ನಡೆಸಲಾಗುತ್ತಿದ್ದು, ಮಾರ್ಚ್ 6 ರಂದು ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಕಲೆಗಳ ಇಲಾಖೆಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಮಾರ್ಚ್ 8 ರಂದು ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು, ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂ ವಿಜ್ಞಾನಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು ನಿರ್ದಿಷ್ಟ ಪತ್ರಿಕೆ – 2 ರ ಪ್ರವೇಶ ಪತ್ರಗಳನ್ನು ಫೆಬ್ರವರಿ 28 ರಿಂದ ಆಯೋಗದ ವೆಬ್‍ಸೈಟ್ https://kpsconline.karnataka.
ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು ನಿಗಧಿತ ದಿನಾಂಕದಂದು ಪರೀಕ್ಷೆಗೆ ಹಾಜರಾಗಬಹುದು ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.