ಉದ್ಯೋಗ ಮಾಡುವುದಕ್ಕಿಂತ ನೀವೇ ಹತ್ತಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯುವತ್ತ ಗಮನಹರಿಸಿ

varthajala
0







 ಉದ್ಯೋಗ ಮಾಡುವುದಕ್ಕಿಂತ ನೀವೇ ಹತ್ತಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯುವತ್ತ ಗಮನಹರಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದರು.

ಕಲಬುರ್ಗಿಯ ಕೆಸಿಟಿ ಕಾಲೇಜು ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ನಿಮ್ಮ ಜೀವನದ ಗುರಿಯಾಗಲಿ” .ನಿಮ್ಮ ಜೀವನ ನಡೆಯಲು ನಿಮಗೆ ಉದ್ಯೋಗ ಬೇಕು ನಿಜ. ಆದರೆ ನೀವು ಉದ್ಯೋಗ ಮಾಡುವುದಕ್ಕಿಂತ ನೀವೇ ಹತ್ತಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯುವತ್ತ ಗಮನಹರಿಸಿ. ಆಗ ಮಾತ್ರ ನೀವು ಯಶಸ್ವಿಯಾಗಲು ಸಾಧ್ಯ. ಉದ್ಯೋಗ ಸಿಗಲಿಲ್ಲ ಎಂದು ನೀವು ಎಂದಿಗೂ ಎದೆಗುಂದಬೇಡಿ. ಜೀವನದಲ್ಲಿ ಒಂದಲ್ಲಾ ಒಂದು ಅವಕಾಶ ಸಿಕ್ಕೇ ಸಿಗುತ್ತದೆ. ಸಿಕ್ಕ ಅವಕಾಶ ಸರಿಯಾಗಿ ಬಳಸಿಕೊಳ್ಳಿ. ಕೌಶಲ್ಯ ಆಧಾರಿತ ಉದ್ಯೋಗ ಮಾಡಿದರೆ ಉತ್ತಮ ಜೀವನ ಸಾಗಿಸಬಹುದು ಎಂದು ತಿಳಿಸಿದರು.

ನಮ್ಮ ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳ ರಕ್ಷಣೆ ಸಿಗುತ್ತದೆ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ನಮ್ಮ ಸರ್ಕಾರದ ಮೇಲೆ ನಿಮ್ಮ ಆಶೀರ್ವಾದವಿರಲಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಐದು ಸಂಸದರನ್ನು ಗೆಲ್ಲಿಸಿ ದೊಡ್ಡ ಶಕ್ತಿ ತುಂಬಿದ್ದೀರಿ ಎಂದು ತಿಳಿಸಿದರು.

ಇದು ಐತಿಹಾಸಿಕ ಕಾರ್ಯಕ್ರಮ. ಕಲ್ಯಾಣ ಕರ್ನಾಟಕದ 26 ಸಾವಿರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡಿಸಲು ಮುಂದಾಗಿರುವ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಅವರ ತಂಡಕ್ಕೆ ಸರ್ಕಾರ ಪರವಾಗಿ ಹಾಗೂ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಕೌಶಲ್ಯ ದೀಪವಿದ್ದಂತೆ. ನೀವು ಒಮ್ಮೆ ಕಲಿತರೆ ಜೀವನ ಪರ್ಯಂತ ನಿಮ್ಮ ಜೀವನದ ದಾರಿ ಬೆಳಗುತ್ತಿರುತ್ತದೆ. ಈ ಇಲಾಖೆಯ ಜವಾಬ್ದಾರಿ ವಹಿಸಿರುವ ಸಚಿವರು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ” ಎಂದು ಶ್ಲಾಘಿಸಿದರು.

Post a Comment

0Comments

Post a Comment (0)