ಪಾಕ್ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು, ಅದು ದೇಶದ್ರೋಹ: ಸಿಎಂ

varthajala
0

 



ಬೆಂಗಳೂರು: ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು. ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರತಿಕ್ರಿಯಿಸಿದರು.

ಮಂಗಳೂರಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದಿದ್ದಕ್ಕೆ ಹತ್ಯೆಯಾಗಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಸಿಎಂ, ಯಾರು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರು? ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಅದು ತಪ್ಪು. ಈ ಬಗ್ಗೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ತೀ ಎಂದು ತಿಳಿಸಿದರು.

ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರು ತಪ್ಪೇ, ಅದು ದೇಶದ್ರೋಹ. ತನಿಖೆ ನಡೆಯುತ್ತಿದೆ, 15 ಜನರ ಅರೆಸ್ಟ್ ಆಗಿದೆ ಎಂದು ಮಾಹಿತಿ ನೀಡಿದರು.

Post a Comment

0Comments

Post a Comment (0)