ಟರ್ಕಿಯಲ್ಲಿ ಸಿನಿಮಾ ಶೂಟಿಂಗ್ ಬೇಡ – ಭಾರತೀಯ ಚಿತ್ರರಂಗ ನಿರ್ಧಾರ

varthajala
0

 




ಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಲ್ಲಿ ಉಗ್ರ ಪೋಷಕ ಪಾಕಿಸ್ತಾನಕ್ಕೆ (Pakistan) ಬೆಂಬಲಿಸಿದ ಟರ್ಕಿಗೆ (Turkey) ಭಾರತೀಯ ಚಿತ್ರರಂಗ ಬಿಸಿ ಮುಟ್ಟಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್‌ಬೈಜಾನ್ ಕುತಂತ್ರದ ಬೆನ್ನಲ್ಲೇ ಸಿನಿಮಾ ರಂಗ ಮಹತ್ವದ ನಿರ್ಧಾರ ಕೈಗೊಂಡಿದೆ. 

ಪಾಕ್ ಬೆಂಬಲಕ್ಕೆ ನಿಂತಿರೋ ಟರ್ಕಿಗೆ ಭಾರತ ಪಾಠ ಕಲಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್‌ಬೈಜಾನ್‌ನಲ್ಲಿ ಯಾವುದೇ ಸಿನಿಮಾದ ಶೂಟಿಂಗ್ ಮಾಡದಿರಲು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯಿಸ್’ ಕಡೆಯಿಂದ ಭಾರತೀಯ ಚಿತ್ರರಂಗ ನಿರ್ಮಾಪಕರಿಗೆ ಪತ್ರದ ಮೂಲಕ ತಿಳಿಸಲಾಗಿದೆ.

ಈ ಎರಡು ದೇಶಗಳ ಜೊತೆ ನಂಟು ಇಟ್ಟುಕೊಳ್ಳದಂತೆ ನಿರ್ದೇಶಕ, ನಿರ್ಮಾಪಕರಿಗೆ ತಿಳಿಸಲಾಗಿದೆ. ಸಿನಿಮಾಗಿಂತಲೂ ದೇಶವೇ ಮುಖ್ಯ. ಟರ್ಕಿ ಜೊತೆ ನಂಟು ಇಟ್ಟುಕೊಂಡರೆ, ಇದರಿಂದ ಭಾರತದ ಭದ್ರತೆ ತೊಂದರೆ ಅಂತ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೆ ಚಿತ್ರರಂಗ ಕೂಡ ಸಾಥ್ ನೀಡಿದೆ.

Tags

Post a Comment

0Comments

Post a Comment (0)