ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Lakes-2025: Healthy Lakes, Healthy Lives: The Need for Conservation” ವಿಷಯದ ಕುರಿತು 2025ನೇ ಮೇ 22 ಮತ್ತು 23ರಂದು ಎರಡು ದಿನಗಳ ರಾಷ್ಟ್ರೀಯ ಕಾರ್ಯಗಾರವನ್ನು ಅಕಾಡೆಮಿಯ ಕಚೇರಿಯಲ್ಲಿ ಹಮ್ಮಿಕೊಂಡಿದೆ.
ಈ ಕಾರ್ಯಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿರುವರು. ಕಾರ್ಯಾಗಾರದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದು.
ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು Research Papers Presentation ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ Research Paper ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು.
ಆಸಕ್ತ ಪ್ರತಿನಿಧಿಗಳು 2025ನೇ ಮೇ 17ರ ಒಳಗಾಗಿ ಗೂಗಲ್ ಫಾರಂ https://forms.gle/
ಹೆಚ್ಚಿನ ಮಾಹಿತಿಗಾಗಿ ಕಾರ್ಯಗಾರ ಸಂಯೋಜಕರ ಮೊಬೈಲ್ ದೂರವಾಣಿ ಸಂ. 9845258894, 9620767819 & 9611198189 ಅಥವಾ ಅಕಾಡೆಮಿಯ ವೆಬ್ ಸೈಟ್ https://kstacademy.in ವೀಕ್ಷಿಸಬಹುದು ಎಮದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.