ಬೆಂಗಳೂರು: 30 ಲಕ್ಷ ರೂ ಮತ್ತು ಅದಕ್ಕಿಂತಲೂ ಮೇಲ್ಪಟ್ಟ ಮೌಲ್ಯದ ಆಸ್ತಿ ಖರೀದಿ ನೋಂದಣಿ ವೇಳೆ ಮಾರಾಟಗಾರರು ಮತ್ತು ಖರೀದಿದಾರರು ಪ್ಯಾನ ವಿವರ ಸಲ್ಲಿಸುವುದನ್ನು ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಡ್ಡಾಯ ಮಾಡಿದೆ,
ನೋಂದಣಿ ಪರಿವೀಕ್ಷಕ ಮತ್ತು ಮುದ್ರಾಂಕ ಆಯುಕ್ತರು ಮೇ 16 ರಂದು ಎಲ್ಲ ಜಿಲ್ಲಾ ನೋಂದಣಾಧಿಕಾರಿಗಳು ಮತ್ತು ಉಪ ನೋಂದಣಾಧಿಕಾರಿ ಕಚೇರಿಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ, 30 ಲಕ್ಷ ರೂ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ಮಾರಾಟಗಾರರು ಮತ್ತು ಖರೀದಿದಾರರ ವಿವರಗಳನ್ನು ಆರ್ಥಿಕ ವರ್ಷಾಂತ್ಯಕ್ಕೆ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ,
ಆಸ್ತಿ ಖರೀದಿ ವಿವರವನ್ನು ಆದಾಯ ತೆರಿಗೆ ಇಲಾಖೆಗೆ ಸಲ್ಲಿಸುವುದು ಬಹಳ ಕಾಲದಿಂದ ಜಾರಿಯಲ್ಲಿದೆ, ಆದರೆ ಇಲಾಖೆಯ ಅಧಿಕಾರಿಗಳು ಈ ವಿವರವನ್ನು ಸಲ್ಲಿಸುತ್ತಿರಲಿಲ್ಲ, ಇದರಿಂದಾಗಿ ಆದಾಯ ತೆರಿಗೆ ಇಲಾಖೆಯಿಂದ ಪದೇ ಪದೇ ಆಕ್ಷೇಪ ಪತ್ರ ಬಂದಿತ್ತು, ಹೀಗಾಗಿ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ, ಇದರಿಂದ ಆದಾಯ ತೆರಿಗೆ ವಂಚನೆ ಪ್ರಕರಣಗಳಿಗೆ ತಡೆ ಬೀಳಲಿದೆ,