ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆಯಲು ಕ್ಯೂಆರ್ ಕೋಡ್ ಮುದ್ರಿತ ಭಿತ್ತಿಪತ್ರ ಬಿಡುಗಡೆ

varthajala
0

 ಬೆಂಗಳೂರು, ಮೇ 10 (ಕರ್ನಾಟಕ ವಾರ್ತೆ):


ಬಸ್ ನಿಲ್ದಾಣದ ಸ್ವಚ್ಛತೆ ನಿರ್ವಹಿಸಲು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಉತ್ತಮ ರೀತಿಯಿಂದ ವರ್ತಿಸಲು ಕ್ಯೂಆರ್ ಕೋಡ್ ಸಹಕಾರಿಯಾಗುತ್ತದೆ ಎಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ಭರಮಗೌಡ (ರಾಜು) ಅ. ಕಾಗೆ ತಿಳಿಸಿದರು.

"ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ" ಶೀರ್ಷಿಕೆ ಅಡಿಯಲ್ಲಿ ಬಸ್ ನಿಲ್ದಾಣದ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆಯಲು ಕ್ಯೂಆರ್ ಕೋಡ್ ಮುದ್ರಿತ ಭಿತ್ತಿಪತ್ರವನ್ನು ಬಿಡಗುಡೆಗೊಳಿಸಿ ಮಾತನಾಡಿದ ಅವರು, ಬಸ್ ನಿಲ್ದಾಣಗಳ ಸ್ವಚ್ಚತೆ, ಶೌಚಾಲಯಗಳ ನಿರ್ವಹಣೆ, ತ್ಯಾಜ್ಯ ವಿಲೇವಾರಿ, ಶೌಚಾಲಯದ ದರ ಪಟ್ಟಿ ಅಳವಡಿಕೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಂಚಾರ ನಿಯಂತ್ರಕರು ಪ್ರಯಾಣಿಕರೊಂದಿಗೆ ಸೌಜನ್ಯದ ನಡವಳಿಕೆ ಇತ್ಯಾದಿ ಅಂಶಗಳ ಕುರಿತಾದ ಮೌಲ್ಯಮಾಪನ ಮಾಡಿ ಶ್ರೇಣಿವಾರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸ್ ನಿಲ್ದಾಣಗಳನ್ನು ಹಾಗೂ ಅಲ್ಲಿನ ಸಿಬ್ಬಂದಿಗಳನ್ನು ಗುರುತಿಸಿ “ನಮ್ಮ ಬಸ್ ನಿಲ್ದಾಣ, ಸ್ವಚ್ಚ ನಿಲ್ದಾಣ" ಎಂಬ ಶೀರ್ಷಿಕೆಯಡಿಯಲ್ಲಿ ಬಹುಮಾನ/ಪ್ರಶಸ್ತಿಗಳನ್ನು ನೀಡಿ ಪೆÇ್ರೀತ್ಸಾಹಿಸಲು ನಿರ್ಧರಿಸಲಾಗಿದೆ ಎಂದರು.

ಉಪಾಧ್ಯಕ್ಷರಾದ ಪೀರಸಾಬ್ ಕೌತಾಳ್ ಮಾತನಾಡಿ, ಸಂಸ್ಥೆಯ ಎಲ್ಲಾ ಬಸ್ ನಿಲ್ದಾಣಗಳ ಸ್ವಚ್ಛತೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಸಹಕಾರಿಯಾಗುವಂತೆ ಸಾರ್ವಜನಿಕ ಪ್ರಯಾಣಿಕರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಹೆಚ್ಚು ಹೆಚ್ಚು ಅಭಿಪ್ರಾಯ ದಾಖಲಿಸಲು ತಿಳಿಸಿದರು.

ಸಾರ್ವಜನಿಕ ಪ್ರಯಾಣಿಕರು ಬಸ್ ನಿಲ್ದಾಣದ ಮೌಲ್ಯಮಾಪನ ದಾಖಲಿಸುವ ಬಗೆ:
ಮೊಬೈಲ್ ನಿಂದ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡುವುದು. ಕ್ಯೂಆರ್ ಕೋಡ್ ಲಿಂಕ್ ನಲ್ಲಿ ತಮ್ಮ ಅಭಿಪ್ರಾಯ ದಾಖಲಿಸಿವುದು. ನೊಂದಾಯಿತ ಇಮೇಲ್ ಐಡಿ ರಿಜಿಸ್ಟರ್ ಮಾಡುವುದು.
ಶೌಚಾಲಯದ ಸ್ವಚ್ಛತೆ, ಬಸ್ ನಿಲ್ದಾಣದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ, ಶೌಚಾಲಯ/ಮೂತ್ರಾಲಯದ ಬಳಕೆಯ ಶುಲ್ಕದ ಕುರಿತು ರೇಟಿಂಗ್ಸ್ ನೀಡುವುದು. ಇತರೆ ಅನಿಸಿಕೆ ಅಥವಾ ಅಭಿಪ್ರಾಯವನ್ನು ದಾಖಲಿಸುವುದು. ಒಟ್ಟಾರೆ ಶ್ರೇಣಿಯನ್ನು ನೀಡುವುದು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ, ಎಂ., ಇಲಾಖಾ ಮುಖ್ಯಸ್ಥರಾದ ವಿವೇಕಾನಂದ ವಿಶ್ವಜ್ಞ, ದಿವಾಕರ ಯರಗೊಪ್ಪ, ಶಶೀಧರ ಕುಂಬಾರ, ಅಧಿಕಾರಿಗಳಾದ ಎನ್.ಟಿ.ಪಾಟೀಲ, ಎಂ.ಬಿ.ಕಪಲಿ, ಕೆ.ಎಲ್.ಗುಡೆನ್ನವರ, ಸುಮನಾ.ಯು, ರವಿ ಅಂಚಿಗಾವಿ, ನವೀನಕುಮಾರ ತಿಪ್ಪಾ ಮತ್ತು ಎಲ್ಲಾ ಹಿರಿಯ/ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಕೇಂದ್ರ ಕಛೇರಿಯ ಇನ್ನಿತರ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.

Post a Comment

0Comments

Post a Comment (0)