ಕಾಂಗ್ರೆಸ್ ಪಕ್ಷದ ಯೋಜನೆಗಳು ಜನರ ಮನೆಬಾಗಿಲಿಗೆ ತಲುಪಿದೆ-ಬಸವರಾಜ ರಾಯರೆಡ್ಡಿ

varthajala
0

 





ಕೊಪ್ಪಳ: ಜುಲೈ ತಿಂಗಳಿನಿಂದ ಅನರ್ಹರಿಗೆ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಗ್ಯಾರೆಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ, ಮಂಗಳವಾರ ಕುಕುನೂರಿನಲ್ಲಿ ಈ ಕುರಿತು ಮಾತನಾಡಿದ ಅವರು ಅನರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ, ಅಂಥವರನ್ನು ಹಿಡಿದು ತನಿಖೆ ಮಾಡಿ ಯೋಜನೆಗಳನ್ನು ಸ್ಧಗಿತಗೊಳಿಸಲಾಗುವುದು ಎಂದರು,
ಯಲಬುರ್ಗಾ ತಾಲೂಕಿನಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಭಾಗವಹಿಸಿದರು,
ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ಅಂದಾಜು 250 ಕೋಟಿ ರೂ ಹಣ ಗ್ಯಾರೆಂಟಿ ಯೋಜನೆಗಳಿಗೆ ವೆಚ್ಚವಾಗುತ್ತಿದೆ, ಕಾಂಗ್ರೆಸ್ ಪಕ್ಷದ ಯೋಜನೆಗಳು ಜನರ ಮನೆಬಾಗಿಲಿಗೆ ತಲುಪಿವೆ, ಆದರೂ ಸಹ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗಿದ್ದಾರೆ, ಅವರಿಗೂ ಯೋಜನೆಗಳನ್ನು ತಲುಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ .

Tags

Post a Comment

0Comments

Post a Comment (0)