ಬೆಂಗಳೂರು, ಮೇ 26, (ಕರ್ನಾಟಕ ವಾರ್ತೆ) : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಮೇ 28 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲಾ ಕನ್ನಡ ಭವನ ಲೋಕಾರ್ಪಣೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನದ ಸಮಾರೋಪ ಸಮಾರಂಭ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂದೇ ಕೇಂದ್ರಸ್ಥಾನಕ್ಕೆ ಹಿಂದಿರುಗಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment
0Comments