ಡಾ. ಬಿ.ಆರ್‌ ಅಂಬೇಡ್ಕರ್‌ ಪ್ರತಿಷ್ಠಾನ ವತಿಯಿಂದ ಬಿ.ಆರ್‌ ಅಂಬೇಡ್ಕರ್‌ ಜಯಂತಿ

varthajala
0

ಡಾ. ಬಿ.ಆರ್‌ ಅಂಬೇಡ್ಕರ್‌ ಪ್ರತಿಷ್ಠಾನ ಹಾಗೂ ಸನ್‌ ರೈಸ್‌ ಪೌಂಡೇಶನ್‌ ಮತ್ತು ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಬೆಂಗಳೂರು ದಕ್ಷಿಣ ವಲಯದಲ್ಲಿ ವಿಶ್ವರತ್ನ ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ. ಎ.ಆರ್.‌ ಗೋವಿಂದಸ್ವಾಮಿ ಅವರನ್ನು ಪುರಸ್ಕರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಡಾ. ಆರೂಢ ಭಾರತೀ ಸ್ವಾಮೀಜಿ, ದಲಿತ ಮುಖಂಡರಾದ ಮರಿಯಪ್ಪ, ಮುನಿನಾರಾಯಣ, ಬೆಂ.ವಿ.ವಿ. ಅಂಬೇಡ್ಕರ್‌ ಅಧ್ಯಯನ ಕೇಂದ್ರದ ಭೀಮಾಶಂಕರ್‌, ಹರಿರಾಂ ಸಿಂಗ್‌, ರುದ್ರಮೂರ್ತಿ, ಸ್ಥಳೀಯ ಮುಖಂಡರು ಮುಂತಾದವರು ಉಪಸ್ಥಿತರಿದ್ದರು.

Post a Comment

0Comments

Post a Comment (0)