ಬೆಂಗಳೂರು, ಮೇ 27, (ಕರ್ನಾಟಕ ವಾರ್ತೆ) : 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನೇಕಲ್ ಟೌನ್‍ನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸಾರ್ವಜನಿಕ ಬಾಲಕರ ವಿದ್ಯಾರ್ಥಿನಿಲಯ, ಆನೇಕಲ್ ತಾಲೂಕಿನ ಸರ್ಜಾಪುರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಸಾರ್ವಜನಿಕ ಬಾಲಕರ ವಿದ್ಯಾರ್ಥಿನಿಲಯ, ಜಿಗಣಿಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಸಾರ್ವಜನಿಕ ಬಾಲಕರ ವಿದ್ಯಾರ್ಥಿನಿಲಯ, ಆನೇಕಲ್ ಟೌನ್‍ನ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತಿಪರ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು 2025 ನೇ ಆಗಸ್ಟ್ 31 ರ ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ https://swd.karnataka.gov.in/ ವೀಕ್ಷಿಸಬಹುದು ಹಾಗೂ ಶ್ರೀಮತಿ ಶ್ಯಾಮಲ 9902676783, ಕುಮಾರಿ ಸವಿತಾ ದೇಸಾಯಿ 9986378302, ಲೋಕೇಶ್ ಎಸ್ 9945562040, ಸೋಮಶೇಖರ್ 9972844755 ಇವರ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಆನೇಕಲ್ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.