ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ (ಜೂನ್ 5) ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ವಿದ್ವಾನ್ ಎಸ್. ಅಶೋಕ್ ಅವರ ಪುತ್ರಿಯರಾದ ಕು|| ಭುವನ ಮತ್ತು ಕು|| ಪ್ರೇರಣ ಇವರಿಂದ ದಾಸವಾಣಿ ಕಾರ್ಯಕ್ರಮ ಜರುಗಿತು. ಪಿಟೀಲು ವಾದನದಲ್ಲಿ ವಿದ್ವಾನ್ ಅಭಿರಾಮ್ ಭಟ್ ಮತ್ತು ಮೃದಂಗ ವಾದನದಲ್ಲಿ ವಿದ್ವಾನ್ ಕೃಷ್ಣ ವೇದಾಂತ ಸಾಥ್ ನೀಡಿದರು. ಈ ಕಾರ್ಯಕ್ರಮವನ್ನು ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ ವ್ಯವಸ್ಥೆ ಮಾಡಿದ್ದರು.
Post a Comment
0Comments