ಆಗಸ್ಟ್ 1 ರಂದು ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

varthajala
0

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಆಗಸ್ಟ್ 1ರಂದು ಸಂಜೆ ಆರು ಗಂಟೆಗೆ ದೆಹಲಿಯ ಐಟಿಸಿ ಮೌರ್ಯ ಹೋಟೆಲ್‍ನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ  “ಬ್ರಿಡ್ಜ್ ಟು ಬೆಂಗಳೂರು” ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸುತ್ತಿದ್ದು, ಮುಖ್ಯಮಂತ್ರಿಗಳು ಸಹ ಪಾಲ್ಗೊಳ್ಳುಲಿರುವರು.

ಆಗಸ್ಟ್ 2ರಂದು ಬೆಳಗ್ಗೆ 09.30ಕ್ಕೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಸಾಮಾಜಿಕ ನ್ಯಾಯ, ಡಾ. ಬಿ.ಆರ್. ಅಂಬೇಡ್ಕರ್ ಅವರ ದೃಷ್ಟಿಕೋನ ಕುರಿತಾದ ವಿಚಾರ ಸಂಕಿರಣದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತಿತರರ ವರಿಷ್ಠರೊಂದಿಗೆ ಮುಖ್ಯಮಂತ್ರಿಗಳು ಭಾಗವಹಿಸುವರು.
ವಿಚಾರ ಸಂಕಿರಣದ ಉದ್ಘಾಟನೆಯ ಬಳಿಕ 11.30ಕ್ಕೆ  ಮುಖ್ಯಮಂತ್ರಿಗಳು ಸಾಮಾಜಿಕ ನ್ಯಾಯ ಕುರಿತಾಗಿ ಭಾಷಣ ಮಾಡಲಿದ್ದಾರೆ.

VK DIGITAL NEWS: 


Post a Comment

0Comments

Post a Comment (0)