ಬೆಂಗಳೂರು, ಜುಲೈ 15, (ಕರ್ನಾಟಕ ವಾರ್ತೆ): ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ವತಿಯಿಂದ “ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಅಕಾಡೆಮಿ, ಬೆಂಗಳೂರು, ನೂತನ ಕಟ್ಟಡ ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹದ ಹೊರ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 128 ಸಂಖ್ಯೆ ಸಿಬ್ಬಂದಿ ವಸತಿ ಗೃಹಗಳ ಉದ್ಘಾಟನೆ ಮತ್ತು ಕಾರಾಗೃಹ ಪ್ರಧಾನ ಕಚೇರಿಯ ಅನೆಕ್ಸ್ ಬಿಲ್ಡಿಂಗ್ ನಿರ್ಮಾಣದ ಕಾಮಗಾರಿಯ ಶಂಕುಸ್ಥಾಪನೆ” ಕಾರ್ಯಕ್ರಮವನ್ನು 2025ನೇ ಜುಲೈ 16 ರಂದು ಸಂಜೆ 4.30 ಗಂಟೆಗೆ ಬೆಂಗಳೂರಿನ ಗಾಂಧಿನಗರದ ಕಾಳಿದಾಸ ರಸ್ತೆಯಲ್ಲಿರುವ ಕರ್ನಾಟಕ ಕಾರಾಗೃಹ ಸುಧಾರಣಾ ಸೇವಾ ಅಕಾಡೆಮಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದು, ಕೇಂದ್ರ ಸರ್ಕಾರದ ಮಾನ್ಯ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು.
ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಬೃಹತ್ ಮತ್ತು ಸಣ್ಣ ನೀರಾವರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್, ಮಾನ್ಯ ಕೇಂದ್ರ ಸರ್ಕಾರದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಹಾಗೂ ಮಾನ್ಯ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಘನ ಉಪಸ್ಥಿತಿಯಲ್ಲಿ, ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು.
ಮಾನ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ, ಇಂಧನ ಇಲಾಖೆಯ ಸಚಿವರಾದ ಕೆ.ಜೆ. ಜಾರ್ಜ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ, ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಸುರೇಶ್ ಬಿ.ಎಸ್., ಕರ್ನಾಟಕ ವಿಧಾನಸಭೆಯ ಮಾನ್ಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ವಿರೋಧಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎನ್.ಎ. ಹ್ಯಾರಿಸ್ ಮತ್ತು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ನಸೀರ್ ಅಹ್ಮದ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಪಿ.ಸಿ.ಮೋಹನ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾದ ತೇಜಸ್ವಿ ಎಸ್ ಸೂರ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಸಿ.ಎನ್. ಮಂಜುನಾಥ್, ರಾಜ್ಯಸಭೆ ಸಂಸದರಾದ ಜಿ.ಸಿ. ಚಂದ್ರಶೇಖರ್, ಜಗ್ಗೇಶ್, ಲೆಹರ್ ಸಿಂಗ್ ಸಿರೋಯಾ, ಕೆ. ನಾರಾಯಣ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಅಶ್ವತ್ಥನಾರಾಯಣ್ ಸಿ.ಎನ್. ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರುಗಳು, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಕ.ರಾ.ಪೊ.ವ & ಮೂ.ಸೌ.ಅ.ನಿ.ನಿ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು (ಪಿ.ಸಿ.ಎ.ಎಸ್) ಕೆ.ವಿ. ಶರತ್ ಚಂದ್ರ, ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಅಮ್ಲನ್ ಅದಿತ್ಯ ಬಿಸ್ವಾಸ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿರುವರು.