ಬೆಂಗಳೂರು, ಜುಲೈ 18 (ಕರ್ನಾಟಕ ವಾರ್ತೆ): ಕೃಷಿ ಇಲಾಖೆ, ಕೃಷಿ ತಂತ್ರಜ್ಞರ ಸಂಸ್ಥೆ, ಬೆಂಗಳೂರು ಹಾಗೂ ಇಫ್ಕೋ ಸಂಸ್ಥೆ ಸಂಯುಕ್ತಾಶ್ರಯದಲ್ಲಿ “ಡಿ.ಎ.ಪಿ.ಗೆ ಪರ್ಯಾಯವಾಗಿ ಸಂಯುಕ್ತ ಹಾಗೂ ನ್ಯಾನೋ ರಸಗೊಬ್ಬರಗಳು” ಕುರಿತು ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಇದೇ ಜುಲೈ 19 ರಂದು ಬೆಳಿಗ್ಗೆ 10.30 ಗಂಟೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಬೆಂಗಳೂರಿನ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿರುವ ಡಾ.ಹೆಚ್.ಆರ್.ಅರಕೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಗಾರವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕೃಷಿ ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment
0Comments