ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

varthajala
0

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.  2025ನೇ ಮೇ 31ರ ಪೂರ್ವದಲ್ಲಿ ನೊಂದಾಯಿತರಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  

ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಎಸ್‍ಎಸ್‍ಪಿ (State Scholatship Portal) ಮೂಲಕ ಆನ್‍ಲೈನ್‍ನಲ್ಲಿ ನಡೆಯಲಿದೆ.  ಅರ್ಹ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ ಪಡೆಯಲು ಅಕ್ಟೋಬರ್ 31ರೊಳಗೆ ವೆಬ್‍ಸೈಟ್ https://ssp.karnataka.gov.in/ ಮೂಲಕ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 155214 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕಟ್ಡಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

VK DIGITAL NEWS:

Post a Comment

0Comments

Post a Comment (0)